ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಣಿವೆ ರಾಜ್ಯದಲ್ಲಿ 370 ಮತ್ತು 35ಎ ರದ್ದು : 10 ಪ್ರಮುಖ ಸಂಗತಿಗಳು

|
Google Oneindia Kannada News

ನವದೆಹಲಿ, ಆಗಸ್ಟ್ 05 : ಕೇಂದ್ರ ಸರ್ಕಾರ ಇತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಲು ತೀರ್ಮಾನವನ್ನು ತೆಗೆದುಕೊಂಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದರು. ಇದಕ್ಕೂ ಮೊದಲು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಲೋಕಸಭೆಯಲ್ಲಿ ಈ ಕುರಿತು ಇನ್ನು ಘೋಷಣೆ ಮಾಡಬೇಕಿದೆ.

'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು

370 ಮತ್ತು 35ಎ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ರಾಜ್ಯಸಭೆಯಲ್ಲಿ ಈ ಕುರಿತು ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 7ರಂದು ಈ ಕುರಿತು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

Jammu And Kashmir : Articles 370, 35A to be scrapped

ಮಹತ್ವದ ಬೆಳವಣಿಗೆಯ ಪ್ರಮುಖ ಸಂಗತಿಗಳು ಇಲ್ಲಿವೆ...

* 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸಂವಿಧಾನ ರೂಪಿಸಿಕೊಳ್ಳುವ ಹಕ್ಕು ನೀಡಲಾಗಿತ್ತು. ಆದರೆ, ರಕ್ಷಣೆ, ಸಂಪರ್ಕ ಮತ್ತು ವಿದೇಶಾಂಗ ನೀತಿಗಳಿಗೆ ಈ ನಿಯಮ ಅನ್ವಯ ಆಗುತ್ತಿರಲಿಲ್ಲ.

* 370ರ ನಿಯಮ ರದ್ದಾದರೆ ಸಂವಿಧಾನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸ್ಥಾನಮಾನ ರದ್ದಾಗಲಿದೆ. 1947ರಿಂದ ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿತ್ತು.

ಜಮ್ಮು ಮತ್ತು ಕಾಶ್ಮೀರ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿಗೆ ಗೃಹ ಬಂಧನಜಮ್ಮು ಮತ್ತು ಕಾಶ್ಮೀರ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿಗೆ ಗೃಹ ಬಂಧನ

* ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಕಾನೂನು, ಸಂವಿಧಾನದ ಬದಲಾವಣೆ ತರಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಒಪ್ಪಿಗೆ ಪಡೆಯುವುದು 370ರ ನಿಯಮದಡಿ ಕಡ್ಡಾಯವಾಗಿತ್ತು.

* ಈಗ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ. ಇಬ್ಬರು ಲೆಫ್ಟಿನೆಂಟ್ ಗೌರ್ನರ್ ನೇಮಕವಾಗಲಿದ್ದಾರೆ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಇರಲಿದೆ. ಲಡಾಕ್‌ಗೆ ಇರುವುದಿಲ್ಲ.

* ಕಳೆದ ಹಲವು ದಿನಗಳಿಂದ ಕಣಿವೆ ರಾಜ್ಯದಲ್ಲಿ ಸೇನೆಯನ್ನು ನಿಯೋಜನೆ ಮಾಡಿದ್ದ ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡು ಈ ಘೋಷಣೆ ಮಾಡಿದೆ. ಭಾನುವಾರ ರಾತ್ರಿ ರಾಜ್ಯದ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬಾ ಮಫ್ತಿ, ಓಮರ್ ಅಬ್ದುಲ್ಲಾರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು.

* ಜಮ್ಮು ಮತ್ತು ಕಾಶ್ಮೀರದಲ್ಲಿ ಫೋನ್, ಇಂಟರ್‌ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ವಾರ್ಷಿಕ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಸೇನೆಯನ್ನು ನಿಯೋಜನೆ ಮಾಡಿತ್ತು. ಯಾತ್ರೆಗೆ ಬಂದವರನ್ನು ರಾಜ್ಯದಿಂದ ಹೊರ ಹೋಗುವಂತೆ ಸೂಚನೆ ನೀಡಲಾಗಿತ್ತು.

* ಸೋಮವಾರ ಬೆಳಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಈ ಕುರಿತು ಚರ್ಚೆ ನೆಡೆಸಿದ ಬಳಿಕ ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ ಮಾಡಿದರು.

* ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಶಾಲಾ-ಕಾಲೇಜುಗಳು, ಕಚೇರಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

* ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ಸಹಿ ಮಾಡಿದ್ದಾರೆ.

English summary
In a historical move Union Government to be scrapped Articles 370, 35A at Jammu And Kashmir. Here are the 10 latest developments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X