ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಗೃಹಬಂಧನ
ಶ್ರೀನಗರ, ಸೆಪ್ಟೆಂಬರ್ 16: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾರನ್ನು ಬಂಧಿಸಲಾಗಿದೆ.
ಶ್ರೀನಗರದಲ್ಲಿರುವ ಅವರ ನಿವಾಸವನ್ನೇ ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ಅವರನ್ನು ಅಲ್ಲಿಯೇ ಇರಿಸಲಾಗಿದೆ.ಈ ಕಾಯ್ದೆಯ ಪ್ರಕಾರ ಈ ಕಾಯ್ದೆಯಡಿ ಬಂಧಿತ ವ್ಯಕ್ತಿಯನ್ನು ಯಾವುದೇ ವಿಚಾರಣೆ ಇಲ್ಲದೆ 2 ವರ್ಷ ಜೈಲಿನಲ್ಲಿರಿಸಬಹುದಾಗಿದೆ.
ಫಾರೂಕ್ ಅಬ್ದುಲ್ಲಾ ಅವರ ತಂದೆ ಶೇಖ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿದ್ದಾಗ ಸಾರ್ವಜನಿಕ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು. ಎಂಡಿಎಂಕೆ ನಾಯಕ ವೈಕೋ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕೀಯ ಮಿತ್ರನನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ತಕ್ಷಣವೇ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು.
ಸುಪ್ರೀಂಕೋರ್ಟ್ ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಬೇಕಿತ್ತು. ಇದಕ್ಕೆ ಕೆಲವೇ ನಿಮಿಷಗಳ ಮೊದಲು ಈ ವಿಷಯ ತಿಳಿದುಬಂದಿದೆ.












Click it and Unblock the Notifications