ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರ ಲೆ.ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ

|
Google Oneindia Kannada News

ಶ್ರೀನಗರ್, ಆಗಸ್ಟ್.05: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಲ್ ಇಂಡಿಯಾ ರೇಡಿಯೋ ವರದಿ ಮಾಡಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ರಾಜೀನಾಮೆ ಅಂಗೀಕಾರವಾಗಿದೆಯೇ ಅಥವಾ ತಿರಸ್ಕಾರವಾಗಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಜಮ್ಮುಕಾಶ್ಮೀರ ಎನ್ ಕೌಂಟರ್: ಮೂವರು ಜೈಶ್-ಇ-ಮೊಹಮ್ಮದ್ ಉಗ್ರರ ಹೆಡೆಮುರಿಜಮ್ಮುಕಾಶ್ಮೀರ ಎನ್ ಕೌಂಟರ್: ಮೂವರು ಜೈಶ್-ಇ-ಮೊಹಮ್ಮದ್ ಉಗ್ರರ ಹೆಡೆಮುರಿ

ಭಾರತದ ಕಂಟ್ರೋಲರ್ ಆಡಿಟರ್ ಜನರಲ್ (ಸಿಎಜಿ) ಹುದ್ದೆಗೆ ಮುರ್ಮು ಮುಂಚೂಣಿಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಜಿ.ಸಿ. ಮುರ್ಮು 1985 ರ ಬ್ಯಾಚ್ ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವಿಸ್ (ಐಎಎಸ್) ಗುಜರಾತ್ ಕೇಡರ್ ಅಧಿಕಾರಿಯಾಗಿದ್ದು, ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿದ್ದರು.

Jammu And Kashmir Lieutenant Governor Girish Murmu Resigns

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಅಡಿಯಲ್ಲಿ ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅವರನ್ನು 2019 ರ ಅಕ್ಟೋಬರ್ 31 ರಂದು ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್-ಗವರ್ನರ್ ಆಗಿ ನೇಮಿಸಲಾಯಿತು.

English summary
Jammu And Kashmir Lieutenant Governor Girish Murmu Resigns.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X