• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿ ಜತೆ ಸರ್ವಪಕ್ಷ ಸಭೆಗೂ ಮುನ್ನ ಜಮ್ಮುಕಾಶ್ಮೀರ, ಎಲ್‌ಒಸಿಯಲ್ಲಿ ಹೈ ಅಲರ್ಟ್

|
Google Oneindia Kannada News

ಜಮ್ಮುಕಾಶ್ಮೀರ, ಜೂ.23: ಪ್ರಧಾನಿ ನರೇಂದ್ರ ಮೋದಿಯವರ ಸರ್ವಪಕ್ಷ ನಾಯಕರೊಂದಿಗೆ ಸಭೆ ನಡೆಸುವ ಹಿನ್ನೆಲೆ ಮುಂದಿನ 48 ಗಂಟೆಗಳ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಪ್ರದೇಶಗಳಿಯೂ ಕಟ್ಟೆಚ್ಚರ ವಹಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಸೇವೆಗಳನ್ನು ಸಹ ಶುಕ್ರವಾರ ಸ್ಥಗಿತಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೋದಿ ಜತೆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮುಫ್ತಿ, ಫಾರೂಕ್ ಅಬ್ದುಲ್ಲಾಮೋದಿ ಜತೆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮುಫ್ತಿ, ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರದ ರಾಜಕೀಯ ಮುಖಂಡರ ಸರ್ವಪಕ್ಷ ಸಭೆ ನಡೆಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ), ಕಾಂಗ್ರೆಸ್ ಮತ್ತು ಹಲವಾರು ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳಿಗೆ ಈ ಸಭೆಗೆ ಆಹ್ವಾನವನ್ನು ನೀಡಲಾಗಿದೆ.

 ಸುಮಾರು ಎರಡು ವರ್ಷಗಳ ನಂತರ ಸರ್ವಪಕ್ಷ ಸಭೆ

ಸುಮಾರು ಎರಡು ವರ್ಷಗಳ ನಂತರ ಸರ್ವಪಕ್ಷ ಸಭೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಿದ ಎರಡು ವರ್ಷಗಳ ನಂತರ ಸರ್ವಪಕ್ಷ ಸಭೆ ನಡೆಸಲಾಗುತ್ತಿದೆ. ಕಣಿವೆ ರಾಜ್ಯದ ಮೇಲೆ 1947ರಲ್ಲಿ ಪಾಕಿಸ್ತಾನ ಪ್ರಚೋದಿತ ದಾಳಿ ನಡೆಸಿದ್ದು ಇದಕ್ಕೆ ಹೆದರಿದ ಅಲ್ಲಿನ ಕೊನೆಯ ರಾಜ ಹರಿಸಿಂಗ್‌ ಅಲ್ಲಿಂದ ಓಡಿ ಬಂದು ಭಾರತದ ಬೆಂಬಲ ಕೋರಿದ್ದರು. ನೆರವು ಕೊಡಲು ಸರ್ಕಾರ ಷರತ್ತು ಹಾಕಿದ್ದು, ಅದೇ ವಿಲೀನದ ಷರತ್ತು ಆಗಿದೆ. ಈ ಸಂದರ್ಭದಲ್ಲಿ ಸಂವಿಧಾನದ 370ನೇ ವಿಧಿ ರೂಪುಗೊಂಡಿದೆ. ಈ ವಿಧಿಯ ಪ್ರಕಾರ ಕಾಶ್ಮೀರದ ರಕ್ಷಣೆ, ವಿದೇಶಾಂಗ ವ್ಯವಹಾರ, ಸಂಪರ್ಕ ಕ್ಷೇತ್ರಗಳು ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟರೆ, ಉಳಿದೆಲ್ಲ ಅಧಿಕಾರ ರಾಜ್ಯದಲ್ಲಿ ಉಳಿಯುತ್ತದೆ. ಈ ವಿಧಿಯನ್ನು ನರೇಂದ್ರ ಮೋದಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದು ಮಾಡಿ, ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಕಲ್ಪಿಸಿ, ಅಲ್ಲಿ ಅಂತರ್ಜಾಲ ಸೇವೆಯನ್ನು ಕಡಿತಗೊಳಿಸಿತ್ತು. ಹಲವಾರು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು.

 ಜಮ್ಮು-ಕಾಶ್ಮೀರದಲ್ಲಿ ಈಗ ಸರ್ವಪಕ್ಷ ಸಭೆಯ ಹಿಂದಿನ ಕಾರಣ

ಜಮ್ಮು-ಕಾಶ್ಮೀರದಲ್ಲಿ ಈಗ ಸರ್ವಪಕ್ಷ ಸಭೆಯ ಹಿಂದಿನ ಕಾರಣ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಜಮ್ಮು ಕಾಶ್ಮೀರದ ಈಗಿನ ಪರಿಸ್ಥಿತಿ, ಕೋವಿಡ್‌ ನಿರ್ವಹಣೆ, ವಿಧಿ ರದ್ದತಿ ವಿಚಾರದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಭೆಯ ಹಿನ್ನೆಲೆ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ.

ಕಾಶ್ಮೀರದ ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಸೇವೆಯಿಂದ ವಜಾಕಾಶ್ಮೀರದ ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಸೇವೆಯಿಂದ ವಜಾ

 ಸಭೆಯಲ್ಲಿ ಯಾರೆಲ್ಲಾ ಭಾಗಿ?

ಸಭೆಯಲ್ಲಿ ಯಾರೆಲ್ಲಾ ಭಾಗಿ?

ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಮತ್ತು ಜಮ್ಮು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಗುರುವಾರ ಜಮ್ಮುವಿನಿಂದ ನವದೆಹಲಿಗೆ ತೆರಳಿದ್ದಾರೆ. ಬಿಜೆಪಿಯ ಮಾಜಿ ಮಿತ್ರಪಕ್ಷ ಪಿಡಿಪಿಯ ಮೆಹಬೂಬಾ ಮುಫ್ತಿ ಶ್ರೀನಗರದಿಂದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಜಮ್ಮು ಕಾಶ್ಮೀರದ ಮುಖ್ಯವಾಹಿನಿಯ ಪಕ್ಷಗಳ ಒಕ್ಕೂಟವಾದ ಪಿಎಜಿಡಿಯ ನಾಯಕರು, ರಾಷ್ಟ್ರೀಯ ಸಮ್ಮೇಳನ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾರನ್ನು ನಿವಾಸದಲ್ಲಿ ಬುಧವಾರ ಭೇಟಿಯಾಗಿ ಒಂದು ಗಂಟೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಮತ್ತು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಜಿ.ಎ. ಮೀರ್ ಭಾಗವಹಿಸಲಿದ್ದಾರೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಉನ್ನತ ಮಟ್ಟದ ಸಭೆಯಲ್ಲಿ ಕಾಂಗ್ರೆಸ್‌ ಕೂಡಾ ಜಮ್ಮು ಕಾಶ್ಮೀರದ ಸಭೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ನೀರೆಂದು ಆ್ಯಸಿಡ್ ಸೇವಿಸಿ ತಹಶೀಲ್ದಾರ್ ಅಸ್ವಸ್ಥಜಮ್ಮು ಮತ್ತು ಕಾಶ್ಮೀರ: ನೀರೆಂದು ಆ್ಯಸಿಡ್ ಸೇವಿಸಿ ತಹಶೀಲ್ದಾರ್ ಅಸ್ವಸ್ಥ

 ಸರ್ವಪಕ್ಷ ಸಭೆಯ ಕಾರ್ಯಸೂಚಿ ಏನು?

ಸರ್ವಪಕ್ಷ ಸಭೆಯ ಕಾರ್ಯಸೂಚಿ ಏನು?

ಜಮ್ಮು ಕಾಶ್ಮೀರದಲ್ಲಿ ಈ ಸರ್ವಪಕ್ಷ ಸಭೆಯು ಡಿಲಿಮಿಟೇಶನ್ ಆಯೋಗವು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಿ ಅದರ ವರದಿ ಸಲ್ಲಿಸುವ ಸಾಧ್ಯತೆ ಇರುವ ಸಮಯದಲ್ಲಿ ನಡೆಯುತ್ತಿದೆ. 2011 ರ ಜನಗಣತಿ ಮತ್ತು ಜಮ್ಮು ಕಾಶ್ಮೀರಕ್ಕೆ ಜಿಲ್ಲಾಧಿಕಾರಿ ಸಲ್ಲಿಸಿದ ಸಲ್ಲಿಕೆಗಳನ್ನು ಆಧರಿಸಿದ ಜಮ್ಮು ಕಾಶ್ಮೀರದ ಈ ವರದಿಯು ಯುಟಿಯಲ್ಲಿ ವಿಧಾನಸಭಾ ಚುನಾವಣೆಯ ಸಾಧ್ಯತೆಗೆ ಕಾರಣವಾಗಬಹುದು. ಕೇಂದ್ರವು ಕಾರ್ಯಸೂಚಿಯನ್ನು ನಿಗದಿಪಡಿಸದಿದ್ದರೂ, ಡಿಲಿಮಿಟೇಶನ್, ರಾಜ್ಯತ್ವ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಶುಕ್ರವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

(ಒನ್‌ಇಂಡಿಯಾ ಸುದ್ದಿ)

English summary
Jammu and Kashmir has been put on alert for the next 48 hours ahead of PM Narendra Modi's all-party meet with political leaders from the UT. Similar orders have been issued for areas along the Line of Control (LoC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X