ಎಲ್ಒಸಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ: ನಾಗರಿಕರು ಸೇರಿ ಐವರ ಸಾವು
ಶ್ರೀನಗರ, ನವೆಂಬರ್ 13: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ಮೂವರು ಸೈನಿಕರು ಮತ್ತು ಇಬ್ಬರು ನಾಗರಿಕರು ಬಲಿಯಾಗಿದ್ದಾರೆ. ಜತೆಗೆ ಅನೇಕರು ಗಾಯಗೊಂಡಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಪಾಕಿಸ್ತಾನವು ಕದನ ವಿರಾಮ ಒಪ್ಪಂದವನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದೆ. ಪೂಂಚ್ ಜಿಲ್ಲೆಯಲ್ಲಿ ಸತತ ನಾಲ್ಕನೇ ದಿನ ಕದನ ವಿರಾಮ ಉಲ್ಲಂಘನೆ ನಡೆದಿದೆ. ಉರಿ ವಲಯದಲ್ಲಿ ಶುಕ್ರವಾರ ಈ ದಾಳಿ ನಡೆದಿದೆ. ಮಕ್ಕಳು ಸೇರಿದಂತೆ ಕನಿಷ್ಠ ಆರು ನಾಗರಿಕರು ಸಾವ್ಜಿಯಾರ್ ಪ್ರದೇಶದಲ್ಲಿ ನಡೆದ ಕದನ ವಿರಾಮ ಉಲ್ಲಂಘನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಬಾರಾಮುಲ್ಲಾ ಜಿಲ್ಲಾ ಎಸ್ಡಿಎಂ ರೆಯಾಜ್ ಅಹಮದ್ ಮಲಿಕ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧ್ಯಾಹ್ನ 2.45ರ ಸುಮಾರಿಗೆ ಪಾಕಿಸ್ತಾನವು ಸಣ್ಣ ಆಯುಧಗಳು ಮತ್ತು ಮೋರ್ಟಾರ್ ಶೆಲ್ಲಿಂಗ್ ಮೂಲಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿತು. ಭಾರತೀಯ ಪಡೆಗಳು ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿವೆ ಎಂದು ರಕ್ಷಣಾ ವಕ್ತಾರ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
Inputs suggest so far 6-7 Pakistan Army soldiers killed in retaliation and 10-12 injured; In addition a number of Pakistan Army bunkers, fuel dumps and Launch pads destroyed and set on fire. #CeasefireViolation pic.twitter.com/a7Mwok4bsf
— DD News (@DDNewslive) November 13, 2020
ಪಾಕ್ನ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಉತ್ತರಾಖಂಡದ ಹೃಷಿಕೇಶ ಮೂಲದ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ರಾಕೇಶ್ ದೋವಲ್ ಮೃತಪಟ್ಟಿದ್ದಾರೆ. ಭಾರತೀಯ ಪಡೆಗಳು ನಡೆಸಿದ ಪ್ರತಿದಾಳಿಗೆ ಪಾಕಿಸ್ತಾನದ ಕನಿಷ್ಠ 7-8 ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications