ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್‌ಒಸಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ: ನಾಗರಿಕರು ಸೇರಿ ಐವರ ಸಾವು

|
Google Oneindia Kannada News

ಶ್ರೀನಗರ, ನವೆಂಬರ್ 13: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ಮೂವರು ಸೈನಿಕರು ಮತ್ತು ಇಬ್ಬರು ನಾಗರಿಕರು ಬಲಿಯಾಗಿದ್ದಾರೆ. ಜತೆಗೆ ಅನೇಕರು ಗಾಯಗೊಂಡಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನವು ಕದನ ವಿರಾಮ ಒಪ್ಪಂದವನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದೆ. ಪೂಂಚ್ ಜಿಲ್ಲೆಯಲ್ಲಿ ಸತತ ನಾಲ್ಕನೇ ದಿನ ಕದನ ವಿರಾಮ ಉಲ್ಲಂಘನೆ ನಡೆದಿದೆ. ಉರಿ ವಲಯದಲ್ಲಿ ಶುಕ್ರವಾರ ಈ ದಾಳಿ ನಡೆದಿದೆ. ಮಕ್ಕಳು ಸೇರಿದಂತೆ ಕನಿಷ್ಠ ಆರು ನಾಗರಿಕರು ಸಾವ್ಜಿಯಾರ್ ಪ್ರದೇಶದಲ್ಲಿ ನಡೆದ ಕದನ ವಿರಾಮ ಉಲ್ಲಂಘನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಬಾರಾಮುಲ್ಲಾ ಜಿಲ್ಲಾ ಎಸ್‌ಡಿಎಂ ರೆಯಾಜ್ ಅಹಮದ್ ಮಲಿಕ್ ತಿಳಿಸಿದ್ದಾರೆ.

Jammu And Kashmir: Pakistan Ceasefire Violation Kills 3 Soldiers, 2 Civilians

ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಪಾಕ್‌ನಿಂದ ಪಡೆಯಿಂದ ಗುಂಡಿನ ದಾಳಿ ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಪಾಕ್‌ನಿಂದ ಪಡೆಯಿಂದ ಗುಂಡಿನ ದಾಳಿ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧ್ಯಾಹ್ನ 2.45ರ ಸುಮಾರಿಗೆ ಪಾಕಿಸ್ತಾನವು ಸಣ್ಣ ಆಯುಧಗಳು ಮತ್ತು ಮೋರ್ಟಾರ್ ಶೆಲ್ಲಿಂಗ್ ಮೂಲಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿತು. ಭಾರತೀಯ ಪಡೆಗಳು ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿವೆ ಎಂದು ರಕ್ಷಣಾ ವಕ್ತಾರ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ ಪುಲ್ವಾಮಾದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ

ಪಾಕ್‌ನ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಉತ್ತರಾಖಂಡದ ಹೃಷಿಕೇಶ ಮೂಲದ ಬಿಎಸ್ಎಫ್ ಸಬ್ ಇನ್‌ಸ್ಪೆಕ್ಟರ್ ರಾಕೇಶ್ ದೋವಲ್ ಮೃತಪಟ್ಟಿದ್ದಾರೆ. ಭಾರತೀಯ ಪಡೆಗಳು ನಡೆಸಿದ ಪ್ರತಿದಾಳಿಗೆ ಪಾಕಿಸ್ತಾನದ ಕನಿಷ್ಠ 7-8 ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

English summary
3 soldiers and 2 civilians were killed and many injured after Pakistan violated ceasefire along the LOC in Uri sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X