ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದಲ್ಲಿ ಎಲ್ಲಾ ನಿರ್ಬಂಧ ತೆರವು: ಸುಪ್ರೀಂಗೆ ಕೇಂದ್ರ ಹೇಳಿದ್ದೇನು?

|
Google Oneindia Kannada News

ಶ್ರೀನಗರ, ಆಗಸ್ಟ್ 16: ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಪರಿಚ್ಛೇದ 370 ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸುವ ಸಲುವಾಗಿ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದಲ್ಲಿ ಎಲ್ಲಾ ರೀತಿಯ ಸಂಪರ್ಕವನ್ನು ಸ್ಥಗಿತಗೊಳಿಸಿತ್ತು. ಅದರ ಜೊತೆಗೆ ಕರ್ಫ್ಯೂ ಜಾರಿ ಮಾಡಿತ್ತು.

ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ವಿಚಾರ, ಸರ್ಕಾರಕ್ಕೆ ಕಾಲಾವಕಾಶ ಬೇಕು: ಸುಪ್ರೀಂ ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ವಿಚಾರ, ಸರ್ಕಾರಕ್ಕೆ ಕಾಲಾವಕಾಶ ಬೇಕು: ಸುಪ್ರೀಂ

ಇದೀಗ ಕರ್ಫ್ಯೂ ಹಿಂಪಡೆಯಲಾಗಿದ್ದು, ಇನ್ನುಳಿದಂತೆ ಅಂತರ್ಜಾಲ ಸೇವೆ, ಗುಂಪು ಗುಂಪಾಗಿ ಓಡಾಡುವುದು ಸೇರಿ ಹಲವು ನಿರ್ಬಂಧ ಮುಮದುವರೆಸಲಾಗಿದೆ.

 Jammu And Kashmir Restrictions Union Government Says What

ಜಮ್ಮು ಕಾಶ್ಮೀರದಲ್ಲಿ ಒಂದೂವರೆ ಕೋಟಿ ಜನರಿದ್ದು, ಈಗ 10 ಫೋನ್‌ಬೂತ್‌ಗಳಿವೆ ತಮ್ಮ ಸಂಬಂಧಿಕರ ಜೊತೆ ಮಾತನಾಡಲು ಎಲ್ಲರೂ ಹಂಬಲಿಸುತ್ತಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಧಿಸಿದ್ದ ನಿರ್ಬಂಧ ಶೀಘ್ರ ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್‌ ಅರ್ಜಿ ಹಾಕಲಾಗಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದಾಗ ಶೀಘ್ರವೇ ಈ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಹೇಳಿದೆ.

ಮುಂದಿನ ಎಂಟರಿಂದ ಹತ್ತು ದಿನಗಳ ಒಳಗೆ ಎಲ್ಲಾ ಸಮಸ್ಯೆಗಳು ಬಗೆಹರಿದಿವೆ. ವಿಧಿ 370 ರದ್ದುಗೊಳಿಸುವ ಒಂದು ದಿನ ಮೊದಲೇ ಜಮ್ಮು ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿತ್ತು. ಕಾಶ್ಮೀರದಲ್ಲಿ 400ಕ್ಕೂ ಹೆಚ್ಚು ರಾಜಕೀಯ ಮುಖಂಡರು ಗೃಹಬಂಧನದಲ್ಲಿದ್ದಾರೆ.

ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಅವರನ್ನು ಬಂಧಿಸಲಾಗಿದೆ. 50 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಆಗಸ್ಟ್ 4 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅದನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಲಾಗಿತ್ತು.

English summary
Jammu And Kashmir Restrictions Union Government Say What, restrictions in Kashmir will be removed over the next few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X