ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು & ಕಾಶ್ಮೀರ: ಕೇಂದ್ರದ ವಿರುದ್ಧ ಹೋರಾಟಕ್ಕೆ ಹೊಸ ಮೈತ್ರಿಕೂಟ ರಚನೆ

|
Google Oneindia Kannada News

ಶ್ರೀನಗರ, ಅಕ್ಟೋಬರ್ 15: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗುರುವಾರ ಮೊದಲ ಬಾರಿಗೆ ಸಭೆ ಸೇರಿದ ಗುಪ್ಕರ್ ಘೋಷಣೆಯ ಸಹಿ ಹಾಕಿರುವ ರಾಜಕೀಯ ಪಕ್ಷಗಳು, ಕಣಿವೆಯಲ್ಲಿ ವಿಶೇಷ ಸ್ಥಾನಮಾನವನ್ನು ಮರಳಿ ಜಾರಿ ಮಾಡುವ ಹೋರಾಟದ ಗುರಿಯೊಂದಿಗೆ ಹೊಸ ಮೈತ್ರಿಕೂಟವನ್ನು ರಚಿಸಿವೆ.

'ನಮ್ಮ ಮೈತ್ರಿಕೂಟಕ್ಕೆ ಗುಪ್ಕರ್ ಘೋಷಣೆಯ ಜನರ ಮೈತ್ರಿಕೂಟ ಎಂದು ಹೆಸರಿಟ್ಟಿದ್ದೇವೆ. ನಮ್ಮ ಹೋರಾಟವು ಸಾಂವಿಧಾನಿಕ ಹೋರಾಟ. ಭಾರತ ಸರ್ಕಾರವು 2019ರ ಆಗಸ್ಟ್ 5ಕ್ಕೂ ಮುನ್ನ ರಾಜ್ಯದ ಜನತೆಗೆ ಇದ್ದ ಹಕ್ಕುಗಳನ್ನು ವಾಪಸ್ ನೀಡುವುದನ್ನು ಬಯಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಸಾಂವಿಧಾನಿಕ ಮಾನ್ಯತೆಯನ್ನು ಮರಳಿ ತರುವ ಗುರಿ ಹೊಂದಿದ್ದೇವೆ' ಎಂದು ಆರು ರಾಜಕೀಯ ಪಕ್ಷಗಳ ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳ ಸಭೆ: ಏನಿದು ಗುಪ್ಕರ್ ಘೋಷಣೆ?ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳ ಸಭೆ: ಏನಿದು ಗುಪ್ಕರ್ ಘೋಷಣೆ?

ಎನ್‌ಸಿ, ಪಿಡಿಪಿ, ಸಿಪಿಎಂ, ಪಿಸಿ, ಜೆಕೆಪಿಎಂ ಮತ್ತು ಎಎನ್‌ಸಿ ಪಕ್ಷಗಳು ಈ ನೂತನವಾಗಿ ರಚಿಸಿದ ಮೈತ್ರಿಕೂಟದ ಭಾಗವಾಗಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಣಯಗಳನ್ನು ತೆಗೆದುಕೊಳ್ಳಲು ಎಲ್ಲ ಜನಪ್ರತಿನಿಧಿಗಳ ನಡುವೆ ಮಾತುಕತೆ ಆರಂಭಿಸಲು ಮೈತ್ರಿಕೂಟ ಒಲವು ಹೊಂದಿದೆ ಎಂದು ಫಾರೂಕ್ ಹೇಳಿದರು.

Jammu And Kashmir Special Status: Gupkar Declaration Signatories Forms New Alliance

ನಾವು ಜತೆಗೂಡಿದರೆ ಪರಿಸ್ಥಿತಿಯನ್ನು ಬದಲಿಸಬಹುದು: ಕಾಶ್ಮೀರದ ಬಗ್ಗೆ ಮೆಹಬೂಬ ಮುಫ್ತಿ ಹೇಳಿಕೆನಾವು ಜತೆಗೂಡಿದರೆ ಪರಿಸ್ಥಿತಿಯನ್ನು ಬದಲಿಸಬಹುದು: ಕಾಶ್ಮೀರದ ಬಗ್ಗೆ ಮೆಹಬೂಬ ಮುಫ್ತಿ ಹೇಳಿಕೆ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮುನ್ನ ಬಂಧಿಸಲಾಗಿದ್ದ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರ ಬಿಡುಗಡೆಯ ಎರಡು ದಿನಗಳ ನಂತರ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆಸಲಾಗಿದೆ. ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜದ್ ಲೋನ್, ಪೀಪಲ್ಸ್ ಮೂಮೆಂಟ್ ಮುಖಂಡ ಜಾವೇದ್ ಮಿರ್ ಮತ್ತು ಸಿಪಿಐಎಂ ಮುಖಂಡ ಮೊಹಮದ್ ಯೂಸುಫ್ ತಾರಿಗಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.

English summary
Jammu And Kashmir: Six political parites of Gupkar Declaration signatories have formed new alliance for restoring special status.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X