ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ವಿಮಾನ ನಿಲ್ದಾಣ ಸ್ಫೋಟದ ಬೆನ್ನಲ್ಲೇ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರ ಸಾವು

|
Google Oneindia Kannada News

ನವದೆಹಲಿ, ಜೂನ್ 28: ಭಾರತೀಯ ವಾಯುಸೇನೆ ನಿಯಂತ್ರಣದಲ್ಲಿರುವ ಜಮ್ಮು ವಿಮಾನ ನಿಲ್ದಾಣದಲ್ಲಿ ಭಾನುವಾರ ಎರಡು ಸ್ಫೋಟ ಸಂಭವಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದಿದ್ದು, ಪೊಲೀಸ್ ವಿಶೇಷಾಧಿಕಾರಿ ಹಾಗೂ ಅವರ ಪತ್ನಿ ಸಾವನ್ನಪ್ಪಿದ್ದಾರೆ.

ಭಾನುವಾರ ರಾತ್ರಿ 11ರ ಸಮಯದಲ್ಲಿ ಅವಂತಿಪೊರಾದ ಹರಿಪರಿಗಾಂವ್‌ನಲ್ಲಿರುವ ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹ್ಮದ್ ಅವರ ನಿವಾಸಕ್ಕೆ ನುಗ್ಗಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಹಾಗೂ ಅವರ ಕುಟುಂಬದವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಫಯಾಜ್ ಹಾಗೂ ಅವರ ಪತ್ನಿ ರಾಜಾ ಬೇಗಂ ಮೃತಪಟ್ಟಿದ್ದಾರೆ. ಅವರ ಮಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Jammu And Kashmir SPO And Wife Kills In Terrorists Attack At Pulwama

ಜಮ್ಮು ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯುಪಡೆ ಕೇಂದ್ರವೊಂದರ ಮೇಲೆ ಭಾನುವಾರ ಡ್ರೋನ್ ಮೂಲಕ ಉಗ್ರರು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಪುಲ್ವಾಮಾದಲ್ಲಿ ಮತ್ತೊಂದು ದಾಳಿ ನಡೆಸಲಾಗಿದೆ.

ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟಕ್ಕೆ ಡ್ರೋನ್ ಬಳಕೆ ಹಿಂದೆ ಪಾಕ್ ಪಿತೂರಿ!?
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.

Recommended Video

ರೋಹಿಣಿ ಹೇಳೋ ತೋಳ ಬಂತು ತೋಳ ಕಥೆ ಕೇಳೋಕೆ ನಾನು ಸಿದ್ಧವಾಗಿಲ್ಲ !! | Oneindia Kannada

"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ತಿಳಿದುಬಂದಿದೆ.

English summary
A special police officer in jammu kashmir and his wife killed by terrorist attack in Hariparigam Tral area of Pulwama district in South Kashmir on Sunday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X