ಜಮ್ಮು ಬಸ್ ಸ್ಟ್ಯಾಂಡ್ ನಲ್ಲಿ ಗ್ರೆನೇಡ್ ಎಸೆದಿದ್ದ ವ್ಯಕ್ತಿಯ ಬಂಧನ

ಶ್ರೀನಗರ, ಮಾರ್ಚ್ 07 : ಜಮ್ಮು ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿನ ಮೇಲೆ ಗ್ರೆನೇಡ್ ಎಸೆದು ಓರ್ವನ ಸಾವು ಮತ್ತು ಹಲವರ ನೋವಿಗೆ ಕಾರಣನಾಗಿರುವ ವ್ಯಕ್ತಿಯನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ದಿಲ್ಭಾಗ್ ಸಿಂಗ್ ಹೇಳಿದ್ದಾರೆ.

ಶಂಕಿತರ ಬಂಧನ : ಜಮ್ಮುವಿನ ಬಸ್ ಸ್ಟ್ಯಾಂಡಿನಲ್ಲಿ ನಡೆದ ಗ್ರೆನೇಡ್ ದಾಳಿಗೆ ಸಂಬಂಧಿಸಿದಂತೆ ಓರ್ವ ಶಂಕಿತ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇನ್ನೂ 11 ಜನ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗುರುವಾರ ಬೆಳಿಗ್ಗೆ ಸಾಕಷ್ಟು ಜನರಿದ್ದ ಜಮ್ಮು ಬಸ್ ನಿಲ್ದಾಣದ ಬಸ್ ವೊಂದರ ಒಳಗೇ ಗ್ರೆನೇಡ್ ಎಸೆಯಲಾಗಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತರಾಗಿದ್ದಾರೆ. ಜೊತೆಗೆ ಮೂವತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಅವರಲ್ಲಿ ಮೂರು ಜನ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬಸ್ ನಿಲ್ದಾಣದ ಸುತ್ತ ಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಸಿಟಿವಿ ಕ್ಯಾಮರಾ ಫುಟೇಜ್ ಅನ್ನೂ ಪರಿಶೀಲನೆ ಮಾಡಲಾಗುತ್ತಿದೆ.

Jammu bus station blast: 1 suspected terrorist attested

ಘಟನೆ ನಡೆದ ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಸ್ಥಳೀಯರಿಗೆ ಮನೆಯಲ್ಲಿಯೇ ಇರಬೇಕೆಂದು ಸೂಚಿಸಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+