• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎನ್‌ಕೌಂಟರ್: 3 ಉಗ್ರರರನ್ನು ಹತ್ಯೆ ಮಾಡಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ

|

ಶ್ರೀನಗರ,ಫೆಬ್ರವರಿ 19 :ಜಮ್ಮು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತೋರ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಬೀರ್ವಾ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಸದ್ಯ ಅಲ್ಲಿ ಎನ್ ಕೌಂಟರ್ ಮುಂದುವರಿದಿದೆ.ಬುದ್ಗಾಮ್ ನ ಎಸ್ ಪಿಒ ಮೊಹಮ್ಮದ್ ಅಲ್ತಾಫ್ ಉಗ್ರರೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಮನ್ಸೂರ್ ಅಹ್ಮದ್ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಮೂವರು ಉಗ್ರರನ್ನು ಸದೆ ಬಡಿಯಲಾಗಿದೆ. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಬೆಳಗಿನ ಜಾವ 1.30ರವೇಳೆಗೆ ಎನ್‌ಕೌಂಟರ್ ಆರಂಭವಾಗಿತ್ತು. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,ಆರೋಗ್ಯ ಚಿಂತಾಜನಕವಾಗಿದೆ.ಶಾಪಿಯಾನ್ ಜಿಲ್ಲೆಯನ್ನು ಮತ್ತೊಂದು ಎನ್‌ಕೌಂಟರ್ ಪ್ರಗತಿಯಲ್ಲಿದೆ.ಇದು ಮಂಗಳವಾರವೇ ಆರಂಭವಾಗಿತ್ತು.

English summary
One police personnel SPO Mohammad Altaf has lost his life and Manzoor Ahmad was injured in an ongoing operation in Budgam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X