Video: ಭಾರತದ ಪ್ರತಿದಾಳಿಗೆ ಪಾಕ್ ಸೇನಾ ಬಂಕರ್ ನಾಶ, 8 ಯೋಧರು ಸಾವು

ಶ್ರೀನಗರ್, ನವೆಂಬರ್.13: ಜಮ್ಮು ಕಾಶ್ಮೀರದ ಗಡಿಯಲ್ಲಿ ವಾಸ್ತವ ಗಡಿ ರೇಖೆ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯು ನಡೆಸಿರುವ ಪ್ರತಿದಾಳಿಯಲ್ಲಿ 8 ಮಂದಿ ಪಾಕಿಸ್ತಾನ ಯೋಧರು ಹತರಾಗಿದ್ದಾರೆ. ನಾಲ್ವರು ಪಾಕಿಸ್ತಾನ ಸೇನಾ ಯೋಧರು ಮತ್ತು ಮೂವರು ಪಾಕಿಸ್ತಾನ ವಿಶೇಷ ಸೇವಾ ಪಡೆ ಯೋಧರು ಸೇರಿದ್ದಾರೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ನಡೆಸಿರುವ ಪ್ರತಿದಾಳಿಯಲ್ಲಿ ಪಾಕಿಸ್ತಾನದ 10 ರಿಂದ 12 ಮಂದಿ ಯೋಧರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆಗೆ ಸೇರಿದ ಸೇನಾ ಬಂಕರ್, ಪ್ಯೂಯಿಲ್ ಡಂಪ್ ಮತ್ತು ಲಾಂಚ್ ಪ್ಯಾಡ್ ನಾಶಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಉಗ್ರರ ಹಿಂಬದಿಯಲ್ಲಿ ನಿಂತು ಪಾಕಿಸ್ತಾನ ಸೇನಾ ಯೋಧರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ವಾಸ್ತವ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿದ್ದಲ್ಲದೇ ಎರಡು ಪ್ರತ್ಯೇಕ ಕಡೆಗಳಲ್ಲಿ ಕದನ ವಿರಾಮ ಉಲ್ಲಂಘಿಸಲಾಗಿದೆ. ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದರು.

 Jammu-Kashmir Ceasefire Violation: 8 Pakistani Soldiers Killed As Indian Army Retaliates

ಮೂವರು ಭಾರತೀಯ ಯೋಧರು ಹುತಾತ್ಮ:

ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಗುರೇಜ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ ಒಬ್ಬ ಭಾರತೀಯ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಶುಕ್ರವಾರ ಜಮ್ಮು ಕಾಶ್ಮೀರದ ಗಡಿಯುದ್ದಕ್ಕೂ ಹಲವು ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ದವರ್, ಕೆರಾನ್, ಉರಿ ಮತ್ತು ನೌಗಮ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.

2020ರಲ್ಲಿ ಪಾಕಿಸ್ತಾನ ಸೇನೆಯು 4052 ಬಾರಿ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಲ್ಲದೇ ಗುಂಡಿನ ದಾಳಿ ನಡೆಸಿದೆ. ನವೆಂಬರ್ ನಲ್ಲಿ 128 ಬಾರಿ, ಅಕ್ಟೋಬರ್ ನಲ್ಲಿ 394 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು. ಕಳೆದ ವರ್ಷ ಪಾಕಿಸ್ತಾನವು 3233 ಬಾರಿ ವಾಸ್ತವ ಗಡಿ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+