• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮುಕಾಶ್ಮೀರ ಎನ್ ಕೌಂಟರ್: ಮೂವರು ಜೈಶ್-ಇ-ಮೊಹಮ್ಮದ್ ಉಗ್ರರ ಹೆಡೆಮುರಿ

|

ಶ್ರೀನಗರ್, ಜುಲೈ.17: ಕಣಿವೆ ರಾಜ್ಯದಲ್ಲಿ ಕೊರೊನಾವೈರಸ್ ಭೀತಿ ನಡುವೆಯೂ ಭಯೋತ್ಪಾದನಾ ಚಟುವಟಿಕೆಗಳು ಎಗ್ಗಿಲ್ಲದೇ ಸಾಗುತ್ತಿವೆ. ಈ ಹಿನ್ನೆಲೆ ಶಾಂತಿ ಕದಡುತ್ತಿದ್ದ ಭಯೋತ್ಪಾದಕರ ವಿರುದ್ಧ ಪೊಲೀಸರು ಹಾಗೂ ಭದ್ರತಾ ಪಡೆಯ ಸಿಬ್ಬಂದಿಯು ಬೆಳ್ಳಂಬೆಳಗ್ಗೆ ಫೀಲ್ಡ್ ಗೆ ಇಳಿದು ಬಿಟ್ಟಿದ್ದರು.

   Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

   ಜಮ್ಮು ಕಾಶ್ಮೀರದ ಕುಲ್ಗಾಮ್ ಪ್ರದೇಶದ ನಾಗ್ನಾಡ್-ಚಿಮ್ಮಾರ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಪಡೆ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು.

   ಜಮ್ಮು ಕಾಶ್ಮೀರ ಎನ್‌ಕೌಂಟರ್: ಹತರಾದ ಮೂವರು ಹಿಜ್ಬುಲ್ ಉಗ್ರರು

   ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಕೆಲ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

   ಉಗ್ರನ ಗುರುತು ಪತ್ತೆಯಾಗಿಲ್ಲ:

   ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜೈಶ್-ಇ-ಮೊಹಮ್ಮದ್ ಸಂಘಟನೆ ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಗಾಯಗೊಂಡ ಮೂವರು ಭದ್ರತಾ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

   English summary
   Jammu Kashmir Encounter: One Unidentified Terrorist Killed In Kulgam.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X