• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು!

|

ಶ್ರೀನಗರ್, ಜೂನ್.13: ನೆರೆಹೊರೆ ರಾಷ್ಟ್ರಗಳು ಭಾರತದ ವಿರುದ್ಧ ಕತ್ತಿ ಮಸಿಯುತ್ತಿವೆಯಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ. ಲಡಾಖ್ ಗಡಿಗೆ ಸಂಬಂಧಿಸಿದಂತೆ ಚೀನಾ ಸೇನೆ ನಿಯೋಜಿಸುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕಾಲ್ಕೆರೆದು ನಿಂತಿದೆ.

   Haveri people neglect all the rules and participate in Bandi Run | Haveri | Oneindia Kannada

   ಕಳೆದ 1,915 ಗಂಟೆಗಳಿಂದ ಭಾರತ ಮತ್ತು ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿ ಬರುತ್ತಿದೆ. ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

   ಬಿಹಾರದಲ್ಲಿ ನೇಪಾಳ ಸೇನೆಯಿಂದ ದಾಳಿ: ಓರ್ವ ಸಾವು, ಇಬ್ಬರಿಗೆ ಗಾಯ

   ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಹಾಗೂ ಮೋಟಾರು ಬಾಂಬ್ ದಾಳಿಯನ್ನು ನಡೆಸುತ್ತಿದೆ.

   ಪಾಕ್ ನಡೆಸಿದ ಗುಂಡಿನ ದಾಳಿ ವಿಡಿಯೋ ವೈರಲ್:

   ಜಮ್ಮು-ಕಾಶ್ಮೀರ ರಜೌರಿ ಜಿಲ್ಲೆಯ ಮಂಜಕೋಟ್ ಮತ್ತು ಪೂಂಚ್ ಜಿಲ್ಲೆಯ ಬಾಲ್ಕೋಟ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆಯು ಅಪ್ರಯೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನ್ ಕುತಂತ್ರ ಕಾರ್ಯಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರವನ್ನು ನೀಡಿದೆ. ಪಾಕಿಸ್ತಾನ ಸೇನೆಯು ನಡೆಸಿದ ಗುಂಡು ಮತ್ತು ಮೋಟಾರ್ ಬಾಂಬ್ ದಾಳಿಗೆ ಸಂಬಂಧಿಸಿದ ದಾಳಿಯ ವಿಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

   English summary
   Jammu & Kashmir: Pakistan violated ceasefire along Line of Control.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X