• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು-ಕಾಶ್ಮೀರ ಪಂಚಾಯಿತಿ ಚುನಾವಣೆ ಮುಂದೂಡಿಕೆ

|
Google Oneindia Kannada News

ಶ್ರೀನಗರ್, ಫೆಬ್ರವರಿ.18: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ನಡೆಯಬೇಕಿದ್ದ ಪಂಚಾಯಿತಿ ಚುನಾವಣೆಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಮುಂದೂಡಿಕೆ ಮಾಡಿದೆ. ಇನ್ನೆರೆಡು ವಾರಗಳ ನಂತರ ಚುನಾವಣಾ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆಯು ಹತೋಟಿಯಲ್ಲಿ ಇರದ ಕಾರಣ, ಸದ್ಯಕ್ಕೆ ಚುನಾವಣೆ ನಡೆಸದಿರಲು ತೀರ್ಮಾನಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಮಾರ್ಚ್ ತಿಂಗಳಿನಲ್ಲಿ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟಿಸುವುದಾಗಿ ಆಯೋಗ ಸ್ಪಷ್ಟಪಡಿಸಿದೆ.

ಸೋಷಿಯಲ್ ಮೀಡಿಯಾ ಬಳಿಸಿದ್ದಕ್ಕೆ 200 ಮಂದಿ ವಿರುದ್ಧ ಎಫ್ಐಆರ್ಸೋಷಿಯಲ್ ಮೀಡಿಯಾ ಬಳಿಸಿದ್ದಕ್ಕೆ 200 ಮಂದಿ ವಿರುದ್ಧ ಎಫ್ಐಆರ್

ಕಳೆದ 2018ರ ನವೆಂಬರ್ ನಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರವು ಅಧಿಕಾರದಲ್ಲಿ ಇದ್ದಾಗ ಪಂಚಾಯಿತಿ ಚುನಾವಣೆಯನ್ನು ನಡೆಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಚುನಾವಣೆಗಳು ನಡೆದಿಲ್ಲ.

ಪಕ್ಷದ ಮುಖಂಡರಿಲ್ಲದೇ ಚುನಾವಣೆ ಎದುರಿಸಲ್ಲ:

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಶ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರದಲ್ಲಿ ಎನ್ ಸಿಪಿ ನಾಯಕ ಉಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ನಮ್ಮ ನಾಯಕರನ್ನು ಬಿಟ್ಟು ನಾವು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆಯಬೇಕಿದ್ದ ಪಂಚಾಯಿತಿ ಚುನಾವಣೆಗಳನ್ನು ಆಯೋಗವು ಮುಂದೂಡಿಕೆ ಮಾಡಿದೆ.

English summary
Jammu-Kashmir Panchayat Elections Postponed, Next Month Election Election Authority Announced The Fresh Schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X