• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು-ಕಾಶ್ಮೀರ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರಿಗೆ ಹೆಡೆಮುರಿ

|

ಶ್ರೀನಗರ್, ಸಪ್ಟೆಂಬರ್.27: ಕಣಿವೆ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಭದ್ರತಾ ಪಡೆಯು ಇಬ್ಬರು ಉಗ್ರರಿಗೆ ಹೆಡೆಮುರಿ ಕಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆ ಅವಂತಿಪುರ ಪ್ರದೇಶದ ಸಂಬೂರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು.

ಭಾರತೀಯ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಕಣೆಗೆ ಇಳಿದ ಭದ್ರತಾ ಸಿಬ್ಬಂದಿಯು ಭಾನುವಾರ ಸಂಜೆ 6.40 ಗಂಟೆಗೆ ಮೊದಲು ಒಬ್ಬ ಉಗ್ರನನ್ನು ಹೊಡೆದುರುಳಿಸಲಾಯಿತು. ರಾತ್ರಿ 7.38 ಗಂಟೆಗೆ ನಡೆದ ಎನ್ ಕೌಂಟರ್ ನಲ್ಲಿ 2ನೇ ಉಗ್ರನನ್ನು ಹತ್ಯೆಗಯ್ಯಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಭಾರತೀಯ ಭದ್ರತಾ ಸಿಬ್ಬಂದಿ ನಡೆಸಿದ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಉಗ್ರರು ಯಾವ ಸಂಘಟನೆಗೆ ಸೇರಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಉಗ್ರರ ಗುರುತು ಪತ್ತೆ ಬಳಿಕ ಸಂಘಟನೆ ಮತ್ತು ಮೂಲವು ದೃಢವಾಗಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅವಂತಿಪುರದಲ್ಲಿ ಮುಂದುವರಿದ ಕಾರ್ಯಾಚರಣೆ:

ಜಮ್ಮು ಕಾಶ್ಮೀರ ಪುಲ್ವಾಮಾ ಜಿಲ್ಲೆ ಅವಂತಿಪುರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತಷ್ಟು ಶಂಕಿತ ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಮುಂದುವರಿಸುತ್ತಿದೆ. ಕಳೆದ ಸಪ್ಟೆಂಬರ್.22ರಂದು ಜಮ್ಮು ಕಾಶ್ಮೀರದ ಬುದ್ಗಾಮ್ ಪ್ರದೇಶದಲ್ಲಿ ಉಗ್ರರು ಅವಿತು ಕುರಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆಗೆ ಇಳಿಯಿತು. ಭದ್ರತಾ ಸಿಬ್ಬಂದಿಯನ್ನು ಕಂಡಾಕ್ಷಣ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಬುದ್ಗಾಮ್ ನಲ್ಲಿರುವ ಚರಾರ್-ಐ-ಶರೀಫ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿತ್ತು.

English summary
Jammu Kashmir: Two Terrorist Gunned Down By Security Force In Pulwama, Search Operation Continues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X