• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದ ಪೂಂಚ್ ಗಡಿಯಲ್ಲಿ ಪಾಕ್ ದಾಳಿ: ಓರ್ವ ಯೋಧ ಹುತಾತ್ಮ

|

ಶ್ರೀನಗರ, ಜೂನ್ 22: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಲ್ಲಿ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸಿತ್ತು.

ದೆಹಲಿಯಲ್ಲಿ ಉಗ್ರರ ದಾಳಿ ಸುಳಿವು, ಹೈ ಅಲರ್ಟ್ ಘೋಷಣೆ

ಬೆಳಗಿನ ಜಾವ 3.30ರ ಸುಮಾರಿಗೆ ಪಾಕಿಸ್ತಾನ ಸೇನೆ ಪೂಂಚ್ ಜಿಲ್ಲೆಯ ಕೃಷ್ಣನಗಾಟಿ ವಲಯದಲ್ಲಿ ಅಪ್ರಚೋದಿತ ಗುಂಡು ಮತ್ತು ಶಸ್ತ್ರಾಸ್ತ್ರ ದಾಳಿ ಆರಂಭಿಸಿತು, ನಂತರ ಮತ್ತೆ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಸಹ ಪಾಕಿಸ್ತಾನ ಸೇನೆ ಬೆಳಗ್ಗೆ 5.30 ರ ಸುಮಾರಿಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ತಿಳಿಸಿದರು.

ಪಾಕಿಸ್ತಾನ ಯೋಧರು ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯ ರಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನಾ ಯೋಧರ ದಾಳಿಗೆ ಹುತಾತ್ಮರಾಗುತ್ತಿರುವ ನಾಲ್ಕನೇ ಸೇನಾ ಯೋಧ ಇವರಾಗಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಹತ್ತಿರ ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ.

English summary
An Army jawan was killed on Monday as Pakistani troops opened fire and lobbed mortar shells at forward areas along the Line of Control (LoC) and the International Border (IB) in Jammu and Kashmir, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X