ಕಾಶ್ಮೀರದಲ್ಲಿ ಎನ್ ಕೌಂಟರ್ ದಾಳಿ: ಇಬ್ಬರು ಭಯೋತ್ಪಾದಕರ ಹತ್ಯೆ
ಶ್ರೀನಗರ, ನವೆಂಬರ್ 12: ಜಮ್ಮು ಮತ್ತು ಕಾಶ್ಮೀರದ ಗಂಡೆರ್ಬಾಲ್ ಜಿಲ್ಲೆಯಲ್ಲಿ ಭಾರತೀಯ ಸೇನೆಯು ಭಯೋತ್ಪಾದಕರ ಮೇಲೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ.
ಈ ಇಬ್ಬರು ಉಗ್ರರೂ ಲಷ್ಕರ್ ಇ ತೊಯಿಬಾ ಉಗ್ರ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ.
ಗಂಡೆರ್ಬಾಲ್ ಜಿಲ್ಲೆಯ ಸ್ಥಳವೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯೊಂದಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಸಿಬ್ಬಮದಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಇಬ್ಬರನ್ನು ಹತ್ಯೆಗೈಯ್ಯಲಾಗಿದ್ದು. ಇನ್ನೂ ಮೂವರು ಉಗ್ರರು ಇದೇ ಸ್ಥಳದಲ್ಲಿ ಅಡಗಿ ಕುಳಿತಿದ್ದಾರೆ ಎನ್ನಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ.
ಸೋಮವಾರವಷ್ಟೇ, ಇಲ್ಲಿನ ಬಂಡಿಪೊರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು.

ನವೆಂಬರ್ 08 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಬೆಳಗಾವಿಯ ರಾಹುಲ್ ಬೈರು ಸುಳಗೇಕರ್ ಎಂಬ ಯೋಧ ಹುತಾತ್ಮರಾಗಿದ್ದರು.












Click it and Unblock the Notifications