ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

14 ತಿಂಗಳ ಬಂಧನದಿಂದ ಕೊನೆಗೂ ಮೆಹಬೂಬ ಮುಫ್ತಿ ಬಿಡುಗಡೆ

|
Google Oneindia Kannada News

ಶ್ರೀನಗರ, ಅಕ್ಟೋಬರ್ 13: ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ.

2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವ 370ನೇ ವಿಧಿಯ ರದ್ದತಿ ಸಂದರ್ಭದಲ್ಲಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿ ಬಂಧಿಸಲಾಗಿತ್ತು. ಸುಮಾರು 14 ತಿಂಗಳ ನಂತರ ಅವರನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು.

ಮೆಹಬೂಬಾ ಮುಫ್ತಿಯನ್ನು ಎಷ್ಟು ದಿನ ಬಂಧಿಸಿಡುತ್ತೀರಿ?: ಸುಪ್ರೀಂಕೋರ್ಟ್ ಪ್ರಶ್ನೆಮೆಹಬೂಬಾ ಮುಫ್ತಿಯನ್ನು ಎಷ್ಟು ದಿನ ಬಂಧಿಸಿಡುತ್ತೀರಿ?: ಸುಪ್ರೀಂಕೋರ್ಟ್ ಪ್ರಶ್ನೆ

ಯಾವುದೇ ವಿಚಾರಣೆಯಿಲ್ಲದೆ ಮೂರು ತಿಂಗಳ ಕಾಲ ಬಂಧಿಸಿಡಲು ಈ ಕಾಯ್ದೆ ಅವಕಾಶ ನೀಡುತ್ತದೆ. ಅವರ ಬಂಧನ ಅವಧಿಯನ್ನು ಇದುವರೆಗೂ ವಿಸ್ತರಿಸುತ್ತಾ ಬರಲಾಗಿತ್ತು. ಮೆಹಬೂಬ ಅವರ ಮಗಳು ಇಲ್ತಿಜಾ ಮುಫ್ತಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬ ಮುಫ್ತಿ ಬಿಡುಗಡೆಗೆ ಗಡುವು ನಿಗದಿಪಡಿಸಿತ್ತು.

JK PDP Chief Mehbooba Mufti Released From Detention After 14 Months

ಮುಫ್ತಿ ಅವರನ್ನು ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಚೆಷ್ಮಾ ಶಹಿ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ಬಳಿಕ ಶ್ರೀನಗರದ ಬೇರೆ ಸರ್ಕಾರಿ ಅತಿಥಿ ಗೃಹಕ್ಕೆ ವರ್ಗಾಯಿಸಲಾಗಿತ್ತು. ನಂತರ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಗೃಹ ಬಂಧನದಲ್ಲಿ ಮುಂದುವರಿಸಲಾಗಿತ್ತು. ಮುಫ್ತಿ ಬಂಧನವನ್ನು ಮಗಳು ಇಲ್ತಿಜಾ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

'ಹೀಗೆ ಎಷ್ಟು ದಿನಗಳ ಕಾಲ ಮುಫ್ತಿ ಅವರನ್ನು ಬಂಧನದಲ್ಲಿ ಇರಿಸಬಹುದು?' ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತ ಹಾಗೂ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಕೇಳಿತ್ತು. ಈ ಬಗ್ಗೆ ವಿವರಣೆ ನೀಡುವಂತೆ ಎರಡು ವಾರಗಳ ಕಾಲಾವಕಾಶ ನೀಡಿತ್ತು. ಆ ಗಡುವು ಸಮೀಪಿಸುವ ಸಂದರ್ಭದಲ್ಲಿಯೇ ಅವರನ್ನು ಬಿಡುಗಡೆ ಮಾಡಲಾಗಿದೆ.

English summary
Former Chief Minister of Jammu and Kashmir, PDP chief Mehbooba Mufti was released 14 months after being detained since scrapping of Article 370.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X