• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಇನ್ಸ್ ಪೆಕ್ಟರ್ ಹತ್ಯೆ

|

ಶ್ರೀನಗರ್, ಅಕ್ಟೋಬರ್.19: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರ ಉಪಟಳ ಹೆಚ್ಚಾಗಿದೆ. ಬೆನ್ನ ಹಿಂದೆ ನುಗ್ಗುವ ಉಗ್ರರು ಪೊಲೀಸರ ಮೇಲೆ ದಾಳಿ ನಡೆಸಿದ್ದು, ಒಬ್ಬ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದಿರುವ ಘಟನೆ ಅನಂತ್ ನಾಗ್ ಜಿಲ್ಲೆಯಲ್ಲಿ ವರದಿಯಾಗಿದೆ.

ವರದಿಗಳ ಪ್ರಕಾರ, ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಗೆ ರವಾನಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯು ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಉಗ್ರರನ್ನು ಮಟ್ಟ ಹಾಕುವುದಕ್ಕಾಗಿ ಘಟನಾ ಸ್ಥಳವನ್ನು ಭದ್ರತಾ ಸಿಬ್ಬಂದಿಯು ಇದೀಗ ಸುತ್ತುವರಿದಿದೆ.

ನಾಟಕೀಯ ರೀತಿಯಲ್ಲಿ ಶರಣಾದ ಉಗ್ರ: ವಿಡಿಯೋ

ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಸಂಘರ್ಷದಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆಯ ಯೋಧರು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಮೆಲ್ಹೊರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

ಇಬ್ಬರಿಂದ ಮೂವರು ಉಗ್ರರ ಸರೆ:

ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಎರಡರಿಂದ ಮೂರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಶೋಪಿಯಾನ್ ಜಿಲ್ಲೆಯ ಮೆಲ್ಹೊರಾ ಪ್ರದೇಶಗಳಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ.

ಕಳೆದ ಅಕ್ಟೋಬರ್.10ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಕುಲ್ಗಾಂ ಜಿಲ್ಲೆಯ ಚಿಂಗಾಮ್ ಎಂಬ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆಗೆ ಇಳಿದಿತ್ತು. ಭಾರತೀಯ ಸೇನಾಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಅಂದು ಕೂಡಾ ಇಬ್ಬರು ಉಗ್ರರನ್ನು ಹತ್ಯೆಗಯಯ್ಲಾಗಿತ್ತು.

English summary
JK Police Inspector Shot Dead By Terrorists In Anantnag Dist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X