ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಾಪಾರಿ ಸಾವು

ಶ್ರೀನಗರ, ನವೆಂಬರ್ 8: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಸೋಮವಾರ ರಾತ್ರಿ ಶ್ರೀನಗರದ ಬೋಹ್ರಿ ಕಡಲ್ ಪ್ರದೇಶದ ಅಂಗಡಿಯೊಂದರ ಹೊರಭಾಗದಲ್ಲಿ ವ್ಯಕ್ತಿಯೊಬ್ಬನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಿಂದ ಗಾಯಗೊಂಡ ಒಬ್ಬ ನಾಗರಿಕ ಸೋಮವಾರ ಸಾವಿನ ಮನೆ ಸೇರಿದ್ದಾನೆ.

ಬಂಡಿಪೋರಾದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಇಬ್ರಾಹಿಂ ಖಾನ್, ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಇಬ್ರಾಹಿಂ ಖಾನ್ ಎಂಬಾತನನ್ನು ಶ್ರೀನಗರದ ಮಹಾರಾಜ ಹರಿಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಲೇ ಅವರು ಮೃತಪಟ್ಟಿದ್ದಾರೆ.

"ಶ್ರೀನಗರದ ಬೋಹ್ರಿ ಕಡಲ್ ಎಂಬ ಪ್ರದೇಶದಲ್ಲಿ ಸೋಮವಾರ ರಾತ್ರಿ 8.10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ವಿಷಯ ತಿಳಿದಾಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿದರು," ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Kashmir: One Civilian Death in Terrorists Attack at Downtown Srinagar

ಉಗ್ರರು ಹಾರಿಸಿದ ಗುಂಡಿನಿಂದ ವ್ಯಕ್ತಿ ಸಾವು:

ಪ್ರಾಥಮಿಕ ತನಿಖೆ ಪ್ರಕಾರ, ಉಗ್ರರು ಹಾರಿಸಿದ ಗುಂಡಿನಿಂದ ವ್ಯಕ್ತಿ ಗಾಯಗೊಂಡಿದ್ದು, ತದನಂತರ ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ ಎಂದು ಗೊತ್ತಾಗಿದೆ. ಈ ಸಂಬಂಧ ಕಾನೂನು ಅಡಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಉಗ್ರರ ದಾಳಿಗೆ ಭಾನುವಾರವೊಬ್ಬ ಯೋಧ ಹುತಾತ್ಮ:

ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್‌ ಸಿಬ್ಬಂದಿ ತೌಸಿಫ್‌ ಅಹ್ಮದ್‌ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಗರದ ಬಟ್ಮಾಲೂ ಪ್ರದೇಶದ ಎಸ್‌ಡಿ ಕಾಲೋನಿಯಲ್ಲಿರುವ ಪೊಲೀಸ್‌ ಸಿಬ್ಬಂದಿ ತೌಸಿಫ್‌ ಅಹ್ಮದ್‌ ನಿವಾಸದ ಸಮೀಪದಲ್ಲಿ ಈ ಉಗ್ರರು ಪೊಲೀಸ್‌ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ," ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವೆಂಬರ್ ತಿಂಗಳಿನಲ್ಲಿ ಮುಂದುವರಿದ ಉಗ್ರರ ಹಾವಳಿ

ಕಳೆದ ಅಕ್ಟೋಬರ್ ತಿಂಗಳ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಇರುವ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಸರಣಿ ದಾಳಿಗಳನ್ನು ನಡೆಸಿದ್ದರು. ಅಕ್ಟೋಬರ್ ತಿಂಗಳ ಆರಂಭದಲ್ಲೇ ನಡೆಸಿದ ಎರಡು-ಮೂರು ದಾಳಿಗಳಲ್ಲಿ ಐದಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಕೊಂದು ಹಾಕಲಾಗಿತ್ತು. ಅದಾದ ನಂತರ ಮೊದಲ ಬಾರಿಗೆ ಉಗ್ರರು ಮತ್ತೊಮ್ಮೆ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

ನವೆಂಬರ್ 5ರಂದು ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತಲಿನಲ್ಲಿ ಕಾಣಿಸಿಕೊಂಡ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಯಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಉಗ್ರರ ಪತ್ತೆಗೆ ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ಉಗ್ರರ ಮತ್ತಷ್ಟು ಉದ್ದೇಶಿತ ದಾಳಿಗಳನ್ನು ತಡೆಯಲು ಶ್ರೀನಗರದಲ್ಲಿ ಹೆಚ್ಚುವರಿ 50 ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಶ್ರೀನಗರ ಆಸ್ಪತ್ರೆ ಬಳಿಯೂ ಭಯೋತ್ಪಾದಕರ ಗುಂಡಿನ ಸದ್ದು

ಕಳೆದ ನವೆಂಬರ್ 4ರಂದು ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ನಾಗರಿಕರು ಈ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಲಾಭ ಪಡೆದ ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ," ಎಂದು ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಆರಂಭದಲ್ಲಿ ಇದು ಆಕಸ್ಮಿಕ ಬೆಂಕಿಯ ಘಟನೆ ಎಂದು ಪೊಲೀಸರು ಹೇಳಿದ್ದರು. ಶ್ರೀನಗರದ ಬೆಮಿನಾದ SKIMS ಆಸ್ಪತ್ರೆ ಬಳಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+