• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿ ಹಾರಿಸಿ ಕಾಶ್ಮೀರಿ ಪಂಡಿತ್ ಹತ್ಯೆ

|
Google Oneindia Kannada News

ಬುದ್ಗಾಮ್ ಮೇ 12: ಇಂದು ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಹತ್ಯೆಗೈದಿದ್ದು, ಇದು ಉದ್ದೇಶಿತ ದಾಳಿಗೆ ಮತ್ತೊಂದು ನಿದರ್ಶನವಾಗಿದೆ. ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ಭಟ್ ಅವರಿಗೆ ಗುಂಡು ಹಾರಿಸಿದರು ಎಂದು ಪೊಲೀಸರು ಹೇಳುತ್ತಾರೆ. "ಭಯೋತ್ಪಾದಕರು ಅಲ್ಪಸಂಖ್ಯಾತ ಸಮುದಾಯದ ರಾಹುಲ್ ಭಟ್ ಎಂಬ ನೌಕರನ ಮೇಲೆ ತಹಸೀಲ್ದಾರ್ ಕಚೇರಿ ಚದೂರ ಬುಡ್ಗಾಮ್‌ನಲ್ಲಿ ಗುಂಡು ಹಾರಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಕಳೆದ ಎಂಟು ತಿಂಗಳಿನಿಂದ ಕಾಶ್ಮೀರವನ್ನು ವ್ಯಾಪಿಸುತ್ತಿರುವ ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲಿನ ಉದ್ದೇಶಿತ ದಾಳಿಯ ಸರಣಿಯಲ್ಲಿ ಇಂದಿನ ದಾಳಿ ಇತ್ತೀಚಿನದು. ಉದ್ದೇಶಿತ ಹತ್ಯೆಗಳು ಅಕ್ಟೋಬರ್‌ನಲ್ಲಿ ಪ್ರಾರಂಭವಾಗಿದ್ದವು, ಬಲಿಪಶುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನಿಂದ ಉದ್ಯೋಗಗಳನ್ನು ಹುಡುಕಿಕೊಂಡು ಬಂದ ವಲಸೆ ಪಂಡಿತರು.

ಅಕ್ಟೋಬರ್‌ನಲ್ಲಿ, ಐದು ದಿನಗಳಲ್ಲಿ ಏಳು ನಾಗರಿಕರು ಕೊಲ್ಲಲ್ಪಟ್ಟರು. ಅವರಲ್ಲಿ ಒಬ್ಬ ಕಾಶ್ಮೀರಿ ಪಂಡಿತ, ಒಬ್ಬ ಸಿಖ್ ಮತ್ತು ಇಬ್ಬರು ಸ್ಥಳೀಯೇತರ ಹಿಂದೂಗಳಾಗಿದ್ದಾರೆ. ಬಳಿಕ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ ಮತ್ತು ಪ್ರತ್ಯೇಕತಾವಾದಿ ಬೆಂಬಲಿಗರ ಮೇಲೆ ಪ್ರಮುಖ ಶಿಸ್ತುಕ್ರಮವನ್ನು ಪ್ರಾರಂಭಿಸಿವೆ.

Kashmiri Pandit Shot Dead In Jammu And Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 168 ಭಯೋತ್ಪಾದಕರು ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 75 ಮಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 21 ವಿದೇಶಿ ಸೈನಿಕರು ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಬಿಜೆಪಿ ನೇತೃತ್ವದ ಕೇಂದ್ರವು ಕಣಿವೆಯ ಜನರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

English summary
Terrorists have killed a Kashmiri Pandit Rahul Bhatt in Budgam district of Jammu and Kashmir today, which is another instance of a targeted attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X