ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಿಹಾರ ಕಾರ್ಮಿಕರ ಹತ್ಯೆಯ ಹೊಣೆ ಹೊತ್ತ ಲಷ್ಕರ್!

|
Google Oneindia Kannada News

ಶ್ರೀನಗರ, ಅಕ್ಟೋಬರ್ 18: ಜಮ್ಮು ಕಾಶ್ಮೀರದಲ್ಲಿ ನಾಗರಿಕನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವಷ್ಟೇ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ನಡೆಸಿದ ದಾಳಿ ಹೊಣೆಯನ್ನು ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ಯುನೈಟೆಡ್ ಲಿಬರೇಷನ್ ಫ್ರೆಂಟ್ ಹೊತ್ತುಕೊಂಡಿವೆ.

ಕಣಿವೆ ರಾಜ್ಯವನ್ನು ತೊರೆಯುವಂತೆ ವಲಸೆ ಕಾರ್ಮಿಕರಿಗೆ ಭಯೋತ್ಪಾದಕ ಸಂಘಟನೆಗಳು ಭಯ ಹುಟ್ಟಿಸುತ್ತಿವೆ. ಈ ನಿಟ್ಟಿನಲ್ಲೇ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಮೇಲಿಂದ ಮೇಲೆ ದಾಳಿ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಮೂರು ಕಡೆ ಉಗ್ರರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ.

 ಜಮ್ಮು ಕಾಶ್ಮೀರದಲ್ಲಿ ಮತ್ತಿಬ್ಬರು ಬಿಹಾರಿ ಕಾರ್ಮಿಕರು ಉಗ್ರರ ಗುಂಡೇಟಿಗೆ ಬಲಿ ಜಮ್ಮು ಕಾಶ್ಮೀರದಲ್ಲಿ ಮತ್ತಿಬ್ಬರು ಬಿಹಾರಿ ಕಾರ್ಮಿಕರು ಉಗ್ರರ ಗುಂಡೇಟಿಗೆ ಬಲಿ

ಭಾನುವಾರ ಬಿಹಾರ ಮೂಲದ ಇಬ್ಬರು ಕಾರ್ಮಿಕರನ್ನು ಹೊಡೆದುರುಳಿಸಿದ ಉಗ್ರರು, ದಕ್ಷಿಣ ಕಾಶ್ಮೀರದ ಕುಲ್ಗಾಮ್ ನಲ್ಲಿರುವ ವಸತಿಗೃಹಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲೇ ಉಗ್ರರು ನಡೆಸಿದ ದಾಳಿಗೆ 11 ಮಂದಿ ವಲಸೆ ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ.

Lashkar-affiliated terror group take claims responsibility for killing Bihar labourers in Jammu Kashmir

ಕಾಶ್ಮೀರ ತೊರೆಯುತ್ತಿರುವ ವಲಸೆ ಕಾರ್ಮಿಕರು, ಪಂಡಿತರು:

ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಡೆಯುತ್ತಿರುವ ನಾಗರಿಕ ಹತ್ಯೆಗಳಿಂದ ಒಂದು ವಾರದ ಹಿಂದೆ ಕಳೆದ ಹಲವು ಶಿಬಿರಗಳಲ್ಲಿ ವಾಸಿಸುತ್ತಿದ್ದ ಹಲವಾರು ಕಾಶ್ಮೀರಿ ಪಂಡಿತರು ರಾಜ್ಯ ತೊರೆಯುವುದಕ್ಕೆ ಪ್ರಮುಖ ಕಾರಣವಾಯಿತು. ಹತ್ತಾರು ಕುಟುಂಬಗಳು - ಕಾಶ್ಮೀರಿ ವಲಸಿಗರಿಗೆ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಯೋಜನೆಯಡಿ ಕೆಲಸ ನೀಡಿದ ನಂತರ ಕಣಿವೆಗೆ ಮರಳಿದ ಅನೇಕ ಸರ್ಕಾರಿ ಉದ್ಯೋಗಿಗಳು ಸದ್ದಿಲ್ಲದೆ ಜಮ್ಮು ಕಾಶ್ಮೀರವನ್ನು ತೊರೆಯುತ್ತಿದ್ದಾರೆ.

ಕಣಿವೆ ರಾಜ್ಯದಲ್ಲಿ ಭಯ ಹುಟ್ಟಿಸುವ ಹುನ್ನಾರ:

ಜಮ್ಮು ಕಾಶ್ಮೀರದಲ್ಲಿ ಭಯದ ವಾತಾವರಣ ಸೃಷ್ಟಿಸುವುದರ ಹಿಂದೆ ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್ಐ) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಸೆಪ್ಟೆಂಬರ್ 13ರಂದು ಉಗ್ರರು, ಸೇನೆ ಹಾಗೂ ಭಯೋತ್ಪಾದಕರೊಂದಿಗೆ ಸಭೆ ನಡೆಸಿದ ಐಎಸ್ಐ ಕಣಿವೆ ರಾಜ್ಯದಲ್ಲಿ ಶಾಂತಿ ಕದಡುವ ಬಗ್ಗೆ ಚರ್ಚೆ ನಡೆಸಿದೆ. ರಾಜ್ಯದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಐಎಸ್ಐ 200 ಜನರ "ಹಿಟ್-ಲಿಸ್ಟ್" ಮಾಡಿದೆ. ಭಾರತೀಯ ಸರ್ಕಾರಕ್ಕೆ ಹತ್ತಿರವಿರುವ ಮಾಧ್ಯಮ ಸಿಬ್ಬಂದಿ ಮತ್ತು ಭಾರತೀಯ ಏಜೆನ್ಸಿಗಳು ಮತ್ತು ಭದ್ರತಾ ಪಡೆಗಳ ಮೂಲಗಳು ಮತ್ತು ಮಾಹಿತಿದಾರರನ್ನು ಹೊರತುಪಡಿಸಿ, ವಲಸೆ ಕಾರ್ಮಿಕರು, ಪಂಡಿತರು ಹಾಗೂ ಕಾಶ್ಮೀರಕ್ಕೆ ಅವರನ್ನು ಹಿಂದಿರುಗಿಸಲು ಸಕ್ರಿಯವಾಗಿ ಶ್ರಮಿಸುತ್ತಿರುವ ಅನೇಕ ಕಾಶ್ಮೀರಿ ಪಂಡಿತರ ಹೆಸರನ್ನು ಸೇರಿಸಲಾಗಿದೆ.

ವಲಸೆ ಕಾರ್ಮಿಕರ ಸುರಕ್ಷತೆಗೆ ಶಿಸ್ತುಕ್ರಮ:

ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ (ಕಾಶ್ಮೀರ) ವಿಜಯ್ ಕುಮಾರ್ ತಿಳಿಸಿದ್ದಾರೆ. "ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ವಲಸೆ ಕಾರ್ಮಿಕರನ್ನು ಈಗಲೇ ಹತ್ತಿರದ ಪೊಲೀಸ್ ಅಥವಾ ಕೇಂದ್ರ ಅರೆಸೇನಾ ಪಡೆ ಅಥವಾ ಸೇನಾ ಕೇಂದ್ರಗಳಿಗೆ ಸ್ಥಾಪನೆಗೆ ಕರೆತರಬೇಕು," ಎಂದು ಸೂಚನೆ ನೀಡಿದ್ದಾರೆ.

ಕಾಶ್ಮೀರ ಗವರ್ನರ್ ಜೊತೆ ಬಿಹಾರ ಸಿಎಂ ಚರ್ಚೆ:

ಶನಿವಾರ ರಾತ್ರಿ ವೇಳೆಗೆ "ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಅರವಿಂದ್ ಕುಮಾರ್ ಎಂಬ ಸ್ಥಳೀಯೇತರ ಮಾರಾಟಗಾರನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಕಾಶ್ಮೀರ ವಿಜಯ್ ಕುಮಾರ್ ಹೇಳಿದ್ದರು. ಅರವಿಂದ್ ಕುಮಾರ್ ಹತ್ಯೆಯಾದ ಮರುದಿನವೇ ಅನಂತನಾಗ್‌ನಲ್ಲಿ ರಾಜಾ ರಿಷಿದೇವ್ ಮತ್ತು ಯೋಗೇಂದ್ರ ರಿಷಿದೇವ್ ಕೊಲೆಯಾದ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ದೂರವಾಣಿ ಮೂಲಕ ಮಾತನಾಡಿದ್ದಾರೆ. ಭಯೋತ್ಪಾದಕ ದಾಳಿಯಲ್ಲಿ ಪೂರ್ವ ರಾಜ್ಯದ ಜನರು ಹತ್ಯೆ ಆಗುತ್ತಿರುವ ಬಗ್ಗೆ ನಿತೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.

English summary
Lashkar-affiliated terror group take claims responsibility for killing Bihar labourers in Jammu Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X