ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಉಗ್ರನ ಅಂತ್ಯ ಸಂಸ್ಕಾರಕ್ಕೆ ನೂರಾರು ಜನ!

|
Google Oneindia Kannada News

ಶ್ರೀನಗರ, ಏಪ್ರಿಲ್.10: ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಭಾರತ ಲಾಕ್ ಡೌನ್ ಘೋಷಿಸಲಾಗಿದೆ. ಇಷ್ಟಾದರೂ ಸಾರ್ವಜನಿಕರು ಕೇಂದ್ರ ಸರ್ಕಾರದ ನಿಯಮಗಳನ್ನು ಮೇಲಿಂದ ಮೇಲೆ ಉಲ್ಲಂಘಿಸುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಸಪೋರ್ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಬಲಿಯಾದ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರ ಸಜಾದ್ ನವಾಬ್ ದಾರ್ ಅಂತ್ಯಕ್ರಿಯೆಯಲ್ಲಿ ನೂರಾರು ಜನರು ಭಾಗಿಯಾಗಿದ್ದು ಸ್ಥಳೀಯ ಆಡಳಿತ ಮಂಡಳಿಗೆ ತಲೆನೋವು ತಂದಿದೆ.

ಜಮ್ಮು-ಕಾಶ್ಮೀರದಲ್ಲಿ 3,000 ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಸ್ಯಾನಿಟೈಸರ್ ಜಮ್ಮು-ಕಾಶ್ಮೀರದಲ್ಲಿ 3,000 ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಸ್ಯಾನಿಟೈಸರ್

ಭಾರತ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಉಗ್ರನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ 90ಕ್ಕೂ ಹೆಚ್ಚು ಮಂದಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Lockdown Violation: More Than 100 People Attend JeM Terrorist Funeral In Jammu Kashmir

ಭಾರತ ಲಾಕ್ ಡೌನ್ ನಿಯಮ ಉಲ್ಲಂಘನೆ:

ಭಾರತ ಲಾಕ್ ಡೌನ್ ನಿಯಮಗಳನ್ನು ಪಾಲಿಸಿ ಉಗ್ರ ಸಜಾದ್ ನವಾಬ್ ದಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು. ಆದರೆ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇ ನೂರಾರು ಜನರು ನೆರೆದಿದ್ದು ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿದು ಬಂದಿದೆ.

English summary
Lockdown Violation: More Than 100 People Attend JeM Terrorist Funeral In Jammu Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X