ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಣಿವೆ ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆ ಇಲ್ಲ, ಮೋದಿ ವಿರುದ್ಧ ಆಕ್ರೋಶ

|
Google Oneindia Kannada News

ನವದೆಹಲಿ, ಮಾರ್ಚ್ 11: ಕಣಿವೆ ರಾಜ್ಯದಲ್ಲಿ ಜಮ್ಮು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸಲಾಗುವುದು ಎಂದು ಪ್ರಧಾನಿ ಮೋದಿ ನೀಡಿದ್ದ ಭರವಸೆ ಹುಸಿಯಾಗಿದ್ದಕ್ಕೆ ಕಣಿವೆ ರಾಜ್ಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ 2019 ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗವು, ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಪುಲ್ವಾಮಾಜಿಲ್ಲೆಯಲ್ಲಿ ಭಯೋತ್ಪಾದಕರ ಆತ್ಮಾಹುತಿ ದಾಳಿಯ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿ ತಿಳಿಗೊಂಡಿಲ್ಲವಾದರೂ, ಚುನಾವಣೆ ನಡೆಸುವ ನಿರೀಕ್ಷೆಯಿತ್ತು.

ಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿ

ಆದರೆ, ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಮತ್ತೊಮ್ಮೆ ಅವಲೋಕಿಸಿ, ಚರ್ಚಿಸಿ, ಚುನಾವಣೆ ನಡೆಸಲು ಸಾಧ್ಯ ಎನಿಸಿದರೆ, ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಜೂನ್‌ನಿಂದ ರಾಜ್ಯಪಾಲರ ಆಡಳಿತವಿದೆ.

ಅನಂತನಾಗ್ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ನಾವು ಮೂರು ಹಂತದ ಮತದಾನ ಪ್ರಕ್ರಿಯೆ ನಡೆಸಬೇಕಾಯಿತು. ಅಲ್ಲಿಯ ಪರಿಸ್ಥಿತಿ ಎಷ್ಟು ಜಟಿಲವಾಗಿದೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ. ಆದರೆ ಆಯೋಗದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸಕಾಲದಲ್ಲಿ ನಡೆಯುತ್ತಿಲ್ಲ

ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸಕಾಲದಲ್ಲಿ ನಡೆಯುತ್ತಿಲ್ಲ

1996ರ ಬಳಿಕ ಇದೇ ಪ್ರಥಮ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸಕಾಲದಲ್ಲಿ ನಡೆಯುತ್ತಿಲ್ಲ. ಮುಂದಿನ ದಿನ ನೀವು ಪ್ರಧಾನಿ ನರೇಂದ್ರ ಮೋದಿಯ ಬಲಿಷ್ಟ ನಾಯಕತ್ವವನ್ನು ಹೊಗಳುವಾಗ ಈ ಅಂಶವನ್ನು ಜ್ಞಾಪಿಸಿಕೊಳ್ಳಿ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

Array

ರಾಜನಾಥ್ ಸಿಂಗ್ ಭರವಸೆ ಹುಸಿ

ಲೋಕಸಭೆಯ ಉಭಯ ಸದನವನ್ನುದ್ದೇಶಿಸಿ ಮಾತನಾಡಿದ್ದ ಗೃಹ ಸಚಿವ ರಾಜನಾಥ್ ಸಿಂಗ್, ಲಭ್ಯವಿರುವ ಎಲ್ಲಾ ಶಕ್ತಿಗಳನ್ನೂ ಬಳಸಿಕೊಂಡು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವುದಾಗಿ ಭರವಸೆ ನೀಡಿದ್ದರು.

ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಜತೆ ವಿಧಾನಸಭೆ ಚುನಾವಣೆ ನಡೆಯಲ್ಲಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಜತೆ ವಿಧಾನಸಭೆ ಚುನಾವಣೆ ನಡೆಯಲ್ಲ

ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕೂಡಾ ಪ್ರತಿಕ್ರಿಯಿಸಿ, ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತಿಲ್ಲವೆಂದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದ್ದಂತಾಗಿದೆ. ಇದರ ಹಿಂದಿನ ರಾಜಕೀಯ ಷಡ್ಯಂತ್ರವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

Array

ಕಾಶ್ಮೀರದಲ್ಲಿ ಆರು ವರ್ಷಗಳ ಕಾಲ ಅವಧಿ

ನವೆಂಬರ್ 2018ರಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನು ವಿಸರ್ಜನೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇದರ ಗರಿಷ್ಠ ಅವಧಿಯ ಮಿತಿ ಮುಗಿಯಲಿದೆ. ಜಮ್ಮು ಮತ್ತು ಕಾಶ್ಮೀರದ 6 ವರ್ಷದ ಅವಧಿ ಮಾರ್ಚ್ 16, 2021ಕ್ಕೆ ಮುಕ್ತಾಯಗೊಳ್ಳಲಿದೆ.ಪಿಡಿಪಿ ಹಾಗೂ ಬಿಜೆಪಿ ನಡುವಿನ ಸಖ್ಯ ಅಂತ್ಯಗೊಂಡಿದ್ದರಿಂದ ಸರ್ಕಾರ ಮುರಿದು ಬಿದ್ದಿದೆ.

2019ರ ಲೋಕಸಭಾ ಚುನಾವಣೆಯ ನೀವು ತಿಳಿಯಲೇ ಬೇಕಾದ 7 ವಿಶೇಷತೆಗಳು! 2019ರ ಲೋಕಸಭಾ ಚುನಾವಣೆಯ ನೀವು ತಿಳಿಯಲೇ ಬೇಕಾದ 7 ವಿಶೇಷತೆಗಳು!

English summary
National Conference leader and former J&K Chief Minister, Omar Abdullah, on Sunday hit out at the Centre minutes after the Election announced that no simultaneous assembly elections will be held in Jammu and Kashmir along with the Lok Sabha polls. In a series of tweets, Abdullah slammed Narendra Modi's leadership and said that the delayed elections in the state showed how "badly the BJP and earlier BJP-PDP mishandled J&K."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X