ಲೋಕಸಭೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ-ಕಾಂಗ್ರೆಸ್ ಮೈತ್ರಿ? ಮುಫ್ತಿ ಏನಂತಾರೆ?

ಶ್ರೀನಗರ, ಮಾರ್ಚ್ 20: ಮುಂಬರುವ ಲೋಕಸಬಾ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ವದಂತಿಯನ್ನು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತಳ್ಳಿಹಾಕಿದ್ದಾರೆ.

'ನಾವು ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತೇವೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಮುಫ್ತಿ ಹೇಳಿದರು.

"ಕಾಂಗ್ರೆಸ್ ಮತ್ತು ಪಿಡಿಪಿ ಮೈತ್ರಿ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ ಇವೆಲ್ಲ ಆಧಾರವಿಲ್ಲದ ವದಂತಿಗಳು. ನಮ್ಮ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಮೈತ್ರಿಯ ಬಗ್ಗೆ ಮಾತನಾಡಲು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಅಕಸ್ಮಾತ್ ಕಾಂಗ್ರೆಸ್ ಮತ್ತು ನ್ಯಾಶ್ನಲ್ ಕಾನ್ಸಫಿರೆನ್ಸ್ ಗಳು ಮೈತ್ರಿ ಮಾಡಿಕೊಳ್ಳುವುದಿದ್ದರೆ ಮಾಡಿಕೊಳ್ಳಲಿ. ಅದು ಅವರ ಪಕ್ಷದ ಆಂತರಿಕ ವಿಷಯ" ಎಂದು ಅವರು ಹೇಳಿದರು.

LS Polls: No Congress PDP alliance in Jammu and Kashmir says Mufti

ವಿಧಾನಸಭೆಯಲ್ಲಿ ಬಿಜೆಪಿ ಜೊತೆ ಪಿಡಿಪಿ ಮೈತ್ರಿ ಮಾಡಿಕೊಂಡಿತ್ತು. ಆದರೆ ಕಳೆದ ಜೂನ್ ನಲ್ಲಿ ಬಿಜೆಪಿ ಬೆಂಬಲ ವಾಪಸ್ ಪಡೆದಿದ್ದರಿಂದ ಸರ್ಕಾರ ಬಿದ್ದಿತ್ತು.

2019 ರ ಲೋಕಸಭಾ ಚುನಾವಣೆ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಐದು ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 11 ರಿಂದ ಆರಂಭವಾಗಿ ಮೇ 6 ರಂದು ಮುಕ್ತಾಯವಾಗಲಿದೆ. ಫಲಿತಾಂಶ ಮೇ 23 ರಂದು ಹೊರಬೀಳಲಿದೆ.

ಈ ಚುನಾವಣೆಯ ನಂತರ ಜಮ್ಮು-ಕಾಶ್ಮೀರದ ವಿಧಾನಸಭೆ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ. ಸದ್ಯಕ್ಕೆ ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+