ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಮತ್ತು ಕಾಶ್ಮೀರದಲ್ಲಿ 9.75 ಕೆಜಿ ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

|
Google Oneindia Kannada News

ಶ್ರೀನಗರ, ಮಾರ್ಚ್ 31: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ 9.75 ಕೆಜಿಯಷ್ಟು ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ದೋಡಾದಲ್ಲಿ ಜಿಲೆಟಿನ್ ಕಡ್ಡಿ ಹಾಗೂ ತಂತಿಗಳ ರೂಪದಲ್ಲಿ ಸುಮಾರು 9.75 ಕೆಜಿಯಷ್ಟು ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಭದ್ರತಾ ಪಡೆ ಬಂಧಿಸಿದೆ. ಕೆಲವು ದಿನಗಳ ಹಿಂದೆ ಕಿಸ್ತ್ವಾರ್ ಜಿಲ್ಲೆಯ ಜಲವಿದ್ಯುತ್ ಯೋಜನಾ ಪ್ರದೇಶ ಸಮೀಪದ ಅಡಗುದಾಣವೊಂದರಿಂದ ಇದೇ ರೀತಿಯ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಮೂರು ದಿನಗಳಲ್ಲಿ ಸ್ಫೋಟಕಗಳನ್ನು ಹಿಂದಿರುಗಿಸಲು ಗಣಿ ಇಲಾಖೆ ಸೂಚನೆ!ಮೂರು ದಿನಗಳಲ್ಲಿ ಸ್ಫೋಟಕಗಳನ್ನು ಹಿಂದಿರುಗಿಸಲು ಗಣಿ ಇಲಾಖೆ ಸೂಚನೆ!

ಖಚಿತ ಮಾಹಿತಿ ಮೇರೆಗೆ ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ, ಆತನಿಂದ 78 ಜಿಲೆಟಿನ್ ಕಡ್ಡಿಗಳು ಹಾಗೂ 275 ಮೀಟರ್ ತಂತಿಯನ್ನು ವಶಪಡಿಸಿಕೊಂಡಿರುವುದಾಗಿ ರಕ್ಷಣಾ ಇಲಾಖೆಯ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Man Held With 9.75 Kg Of Explosive Material In Jammu And Kashmir’s Doda

ಕಣಿವೆ ರಾಜ್ಯದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಆಡಗಿಸಿಟ್ಟಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿತ್ತು. ಐದು ಎಕೆ 47 ರೈಫಲ್ಸ್‍ಗಳು ಸೇರಿದಂತೆ ಭಾರಿ ಪ್ರಮಾಣದ ಸ್ಫೋಟಕಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಗಡಿ ನಿಯಂತ್ರಣ ರೇಖೆ ಸಮೀಪ ಉಗ್ರರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡುತ್ತಿದ್ದಾರೆ ಎಂಬ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನಾಧರಿಸಿ ಸೇನಾ ಯೋಧರು ಕಾರ್ಯಚರಣೆ ನಡೆಸಿ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

English summary
Security forces arrested a person along with 9.75 kilograms of explosive material in the form of 78 gelatine sticks and 275 meters of wire in the hilly Doda district of Jammu on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X