ಮನೋಜ್ ಸಿನ್ಹಾ ಜಮ್ಮು ಕಾಶ್ಮೀರಕ್ಕೆ ನೂತನ ಲೆಫ್ಟಿನೆಂಟ್ ಗವರ್ನರ್

ಶ್ರೀನಗರ, ಆಗಸ್ಟ್ 06: ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.

ಇದೀಗ, ಜಮ್ಮು ಕಾಶ್ಮೀರಕ್ಕೆ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮನೋಜ್ ಸಿನ್ಹಾ ಪೂರ್ವ ಉತ್ತರ ಪ್ರದೇಶದ ಘಾಜಿಪುರದ ಸಂಸದೀಯ ಕ್ಷೇತ್ರದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಕಳೆದ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಫ್ಜಲ್ ಅನ್ಸಾರಿ ಅವರು ಎದುರು ಪರಾಭವಗೊಂಡಿದ್ದರು.

Manoj Sinha To Be The New Lieutenant Governor Of Jammu And Kashmir

ಕೇಂದ್ರ ಸರ್ಕಾರದಲ್ಲಿ ಕಿರಿಯ ರೈಲ್ವೆ ಸಚಿವರಾಗಿಯೂ ಸಿನ್ಹಾ ಸೇವೆ ಸಲ್ಲಿಸಿದ್ದಾರೆ.

ಅಂದ್ಹಾಗೆ, ಗಿರೀಶ್ ಚಂದ್ರ ಮುರ್ಮು ಅವರ ರಾಜೀನಾಮೆಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ಗುರುವಾರ ಒಪ್ಪಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಇನ್ನು ರಾಜೀನಾಮೆ ಬಳಿಕ ಭಾರತದ ಮುಂದಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹರಿಷಿ ಆಗಸ್ಟ್ 7 ರಂದು ತಮ್ಮ ಅವಧಿ ಪೂರ್ಣಗೊಳಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+