Get Updates
Get notified of breaking news, exclusive insights, and must-see stories!

ಒಂದು ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದಿಂದ 10,000 ಭದ್ರತಾ ಸಿಬ್ಬಂದಿ ವಾಪಸ್

ಶ್ರೀನಗರ, ಆಗಸ್ಟ್ 19: ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ವರ್ಷದಿಂದ ಜಮಾವಣೆಗೊಳಿಸಿದ್ದ ಸುಮಾರು 10,000ಕ್ಕೂ ಅಧಿಕ ಭದ್ರತಾ ಪಡೆ ಸಿಬ್ಬಂದಿಯನ್ನು ಕೇಂದ್ರ ಗೃಹ ಸಚಿವಾಲಯ ಹಿಂದಕ್ಕೆ ಕರೆಸಿಕೊಳ್ಳಲು ಆದೇಶಿಸಿದೆ. ಇವುಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಳಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲಿ ನಿಯೋಜಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಿಂದ ತಕ್ಷಣದಿಂದ ಜಾರಿಯಾಗುವಂತೆ ಸಿಎಪಿಎಫ್‌ನ 100 ಕಂಪೆನಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ನಿರ್ಧರಿಸಿದ್ದೇವೆ. ಅವರನ್ನು ಈ ಹಿಂದಿನ ಸ್ಥಳಗಳಿಗೆ ಮರಳಿ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸಾಂವಿಧಾನಿಕ ಮಾನ್ಯತೆಯನ್ನು ರದ್ದುಗೊಳಿಸುವ ಘೋಷಣೆ ಮಾಡುವ ಮುನ್ನ 400 ಹೆಚ್ಚುವರಿ ಭದ್ರತಾ ಪಡೆಗಳ ತುಕಡಿಗಳನ್ನು ಅಲ್ಲಿ ನಿಯೋಜನೆ ಮಾಡಲಾಗಿತ್ತು. ಆಗಸ್ಟ್ 4ರಿಂದ ರಾಜ್ಯದಲ್ಲಿ ಕಠಿಣ ಲಾಕ್‌ಡೌನ್ ಜಾರಿಗೆ ತಂದು, ಅನೇಕ ರಾಜಕೀಯ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

MHA Orders Withdrawal Of Over 10,000 Forces Personnel From Jammu And Kashmir

370ನೇ ವಿಧಿ ರದ್ದುಗೊಳಿಸಿ ವರ್ಷದ ಬಳಿಕ ಈ ಎರಡೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಹುತೇಕ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಹಲವಾರು ರಾಜಕೀಯ ನಾಯಕರನ್ನು ಬಿಡುಗಡೆ ಮಾಡಿದ್ದು, ಸಂವಹನ ವ್ಯವಸ್ಥೆಯನ್ನು ಮರು ಸ್ಥಾಪಿಸಲಾಗಿದೆ. ಈ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಾಮರ್ಶಿಸಿ ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಧಾರ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+