ಜಮ್ಮು-ಕಾಶ್ಮೀರ ಸೇನಾ ಶಿಬಿರದಲ್ಲಿ ನಿಗೂಢ ಸ್ಫೋಟ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ), ಏಪ್ರಿಲ್ 05: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಸೇನಾ ನೆಲೆಯಲ್ಲಿ ನಿಗೂಢ ರೀತಿಯಲ್ಲಿ ಸ್ಫೋಟವೊಂದು ಸಂಭವಿಸಿದೆ.

ಈ ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

15 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ ಹಂಡ್ವಾರ ಪ್ರದೇಶದಲ್ಲಿರುವ ಸೇನಾ ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ್ದು, ಇದು ಉಗ್ರ ಕೃತ್ಯ ಹೌದೋ, ಅಲ್ಲವೋ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಏಪ್ರಿಲ್ 1 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

Mysterious Blast inside army camp in Jammu and Kashmir

ಮಾರ್ಚ್ 29 ರಂದು ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿತ್ತು. ಅದಕ್ಕೂ ಮುನ್ನ ಮಾರ್ಚ್ 27 ರಂದು ಜಮ್ಮು ಕಾಶ್ಮೀರದ ಶೋಪಿಯಾನ್ ನ ಕೆಲ್ಲಾರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ದಾಳಿ ನಡೆಸಿ, ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+