ಕಾಶ್ಮೀರದಲ್ಲಿ ಅಪ್ರಚೋದಿತ ಗುಂಡಿನ ದಾಳಿ: ಬೆಳಗಾವಿ ಯೋಧ ಹುತಾತ್ಮ
ಶ್ರೀನಗರ, ನವೆಂಬರ್ 8: ಜಮ್ಮು -ಕಾಶ್ಮೀರದಲ್ಲಿ ನಡೆದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಬೆಳಗಾವಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ನಾಲ್ವರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಯೋಧರು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು ಯೋಧ ರಾಹುಲ್ ಬೈರು ಸುಳಗೇಕರ್ ಹುತಾತ್ಮರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ ಎಂದಿದ್ದಾರೆ.
ಪೂಂಚ್ ಜಿಲ್ಲ ಕೃಷ್ಣಘಾಟಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.