• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ

|
Google Oneindia Kannada News

ಶ್ರೀನಗರ, ನವೆಂಬರ್ 21: ಪಾಕಿಸ್ತಾನವು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸಂದರ್ಭದಲ್ಲಿ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

26/11 ರಂದು ಮತ್ತೊಂದು ದಾಳಿಗೆ ಜೈಷ್ ಉಗ್ರರಿಂದ ಸಂಚು: ಮೋದಿ26/11 ರಂದು ಮತ್ತೊಂದು ದಾಳಿಗೆ ಜೈಷ್ ಉಗ್ರರಿಂದ ಸಂಚು: ಮೋದಿ

ಇತ್ತೀಚೆಗೆ ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸಲು ಹವಣಿಸುತ್ತಿದ್ದ ಪಾಕಿಸ್ತಾನ ಸೇನೆ ಇದೇ ಕಾರಣಕ್ಕಾಗಿಯೇ ಭಾರತೀಯ ಸೇನೆಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ಮಾಡುತ್ತಿದೆ, ನಮ್ಮ ಭಾತೀಯ ಸೇನೆ ಪ್ರತಿಕಾರದಲ್ಲಿ ನಿರತವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಿನ್ ಪಾಯಿಂಟ್ ದಾಳಿ ಮಾಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮುಂಬೈ ದಾಳಿಯ ದಿನದಂದೇ ಮತ್ತೊಂದು ದೊಡ್ಡ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ತಿಳಿದುಬಂದಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದು, ಜಮ್ಮು ಕಾಶ್ಮೀರದ ನಾಗ್ರೋಟಾದಲ್ಲಿ ಗುರುವಾರ ಭಾರತೀಯ ಸೇನೆಯ ಯೋಧರಿಂದ ಹತ್ಯಗೀಡಾದ ನಾಲ್ವರು ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರು ಭಾರೀ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದರು.

ಎರಡು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ನಾಲ್ವರನ್ನು ಹೊಡೆದುರಿಳಿಸಲಾಗಿದೆ.
ಜೈಷ್ ಎ ಮೊಹಮ್ಮದ್ ಉಗ್ರರ ಹತ್ಯೆ ಕುರಿತು ಮೋದಿ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿವೆ. ಇದರಿಂದ ದೊಡ್ಡ ಹಾನಿ ಮತ್ತು ವಿನಾಶದ ಪ್ರಯತ್ನವನ್ನು ಮತ್ತೊಮ್ಮೆ ವಿಫಲಗೊಳಿಸಿದಂತಾಗಿದೆ ಎಂದು ತಿಳಿಸಿದ್ದಾರೆ.

English summary
One Army personnel has lost his life in ceasefire violation by Pakistan in Nowshera sector of Rajouri district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X