ಪೂಂಚ್ ಗಡಿಯಲ್ಲಿ ಪಾಕ್‌ನಿಂದ ಗುಂಡಿನ ಮೊರೆತ: ಓರ್ವ ನಾಗರಿಕ ಸಾವು
ಪೂಂಚ್, ಜುಲೈ 8: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
Recommended Video
UN ಸಭೆಯಲ್ಲಿ Pakistan ವಿರುದ್ಧ ಭಾರತ ವಾಗ್ದಾಳಿ | Oneindia Kannada
ಪೂಂಚ್ ಜಿಲ್ಲೆಯ ಬಾಲಕೋಟ್ ಹಾಗೂ ಮೆಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವನ್ನಪ್ಪಿ ಮತ್ತೋರ್ವನಿಗೆ ಗಾಯವಾಗಿರುವ ಘಟನೆ ನಡೆದಿದೆ.
ಪರಿಣಾಮ ಓರ್ವ ನಾಗರೀಕ ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, 2.45 ಸುಮಾರಿಗೆ ಗುಂಡಿನ ಮೊರೆತ ಅಂತ್ಯಗೊಂಡಿದ್ದು ಎಂದು ಹೇಳಲಾಗುತ್ತಿದೆ.

ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸಣ್ಣ ಶಶ್ತ್ರಾಸ್ತ್ರಗಳು ಹಾಗೂ ಶೆಲ್, ಮಾರ್ಟರ್ಸ್ ಗಳ ಮೂಲಕ ದಾಳಿ ನಡೆಸಿದ್ದಾರೆ.












Click it and Unblock the Notifications