ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮಾದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

|
Google Oneindia Kannada News

ಶ್ರೀನಗರ, ಮೇ 16: ಉಗ್ರರು ಆತ್ಮಾಹುತಿ ಬಾಂಬ್ ಸ್ಫೋಟಿಸಿ 40ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದ ಪ್ರದೇಶಲ್ಲಿ ಗುರುವಾರ ಎನ್‌ಕೌಂಟರ್‌ ನಡೆದಿದ್ದು, ಮೂವರು ಉಗ್ರರು ಹತರಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಬುದ್ದ ಪೂರ್ಣಿಮೆಯ ದಿನ ದೊಡ್ಡ ದಾಳಿಗೆ ಮಹಿಳಾ ಉಗ್ರರ ಸಂಚು? ಬುದ್ದ ಪೂರ್ಣಿಮೆಯ ದಿನ ದೊಡ್ಡ ದಾಳಿಗೆ ಮಹಿಳಾ ಉಗ್ರರ ಸಂಚು?

ಪುಲ್ವಾಮ ಜಿಲ್ಲೆಯ ದಲಿಪೋರಾದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಉಗ್ರರಿದ್ದ ಮನೆಯನ್ನು ಸುತ್ತುವರೆದಿದ್ದಾರೆ. ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಪ್ರತಿ ದಾಳಿಯಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಮನೆಯಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

One soldier martyred two terrorists killed in an encounter in Pulwama

ಮುಂಜಾಗ್ರತಾ ಕ್ರಮವಾಗಿ ದಲಿಪೋರಾ ಪ್ರಾಂತ್ಯದ ಸುತ್ತಮುತ್ತ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.


ಯೋಧನಿಗೆ ಗುಂಡೇಟು ತಗುಲಿದ್ದು, ಕೂಡಲೇ ಅವರನ್ನು ಸೇನಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಸಿಪಾಯಿ ಸಂದೀಪ್ ಎನ್ನುವವರು ಹುತಾತ್ಮರಾಗಿದ್ದಾರೆ. ಒಟ್ಟು ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

English summary
wo terrorists have been killed and one jawan lost his life in an encounter in Dalipora in Pulwama in Jammu and Kashmir. Operation is still underway. Two terrorists were holed up in a house in Dalipora area of Pulwama.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X