ಪುಲ್ವಾಮಾದಲ್ಲಿ ಎನ್‌ಕೌಂಟರ್: ಓರ್ವ ಉಗ್ರ ಹತ
ಪುಲ್ವಾಮ, ಜುಲೈ 7: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಓರ್ವ ಉಗ್ರನನ್ನು ಸದೆಬಡಿದಿದೆ.
ಮಂಗಳವಾರ ಬೆಳಗ್ಗೆ ಪುಲ್ವಾಮಾದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಪಡೆದು ಭಾರತೀಯ ಸೇನಾ ಪಡೆ, ಕಾರ್ಯಾಚರಣೆಯನ್ನು ಆರಂಭಿಸಿತ್ತು.
ಇದೇ ಸಂದರ್ಭದಲ್ಲಿ ಯೋಧರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು, ಇದಕ್ಕೆ ಪ್ರತಿಯಾಗಿ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಕೂಡಲೇ ಕಾರ್ಯಾಚರಣೆಯನ್ನು ಎನ್‌ಕೌಂಟರ್ ಆಗಿ ಪರಿವರ್ತಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಎನ್‌ಕೌಂಟರ್ ನಡೆಸಿದ್ದಾರೆ.

ಪರಿಣಾಮ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಇನ್ನೂ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.












Click it and Unblock the Notifications