ಪುಲ್ವಾಮಾದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ

ಶ್ರೀನಗರ,ನವೆಂಬರ್ 06: ಭಾರತೀಯ ಸೇನಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಹತ್ಯೆಗೈದಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕೂಡ ಕಾರ್ಯಾಚರಣೆ ಮುಂದವರೆದಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ ಇಬ್ಬರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗದ ಮಧ್ಯೆ ಓರ್ವ ನಾಗರೀಕ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

One Terrorist Killed In Encounter With Security Forces In Pulwama

ಪಾಂಪೋರ್‌ನ ಲಾಲ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದವು.

ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಈ ನಡುವೆ ಮತ್ತೋರ್ವ ಉಗ್ರ ಭದ್ರತಾಪಡೆಗಳಿಗೆ ಶರಣಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಪೂರ್ವ ಲಡಾಖ್‌ನ ಗಡಿ ವಾಸ್ತುವ ರೇಖೆ(ಎಲ್‌ಸಿ)ಬಳಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ.

ಭಾರತ-ಚೀನಾ ಮಧ್ಯೆ ಗಡಿ ಸಂಘರ್ಷ ಆರಂಭವಾಗಿ ಆರು ತಿಂಗಳುಗಳು ಕಳೆದಿದೆ. ಕಳೆದ ಆಗಸ್ಟ್ 29 ಮತ್ತು ಸೆಪ್ಟೆಂಬರ್ 8ರ ಮಧ್ಯೆ ಉತ್ತಮ ಮತ್ತು ದಕ್ಷಿಣ ತೀರದ ಪ್ಯಾಂಗಾಂಗ್ ಸರೋವರದ ಮಧ್ಯೆ ಗಡಿ ರೇಖೆಯುದ್ದಕ್ಕೂ ಚೀನಾ ಸೇನೆ ಸಂಘರ್ಷಕ್ಕೆ ಮುಂದಾಗಿದ್ದರಿಂದ ಭಾರತೀಯ ಸೇನೆ ಅದಕ್ಕೆ ತಕ್ಕ ಉತ್ತರ ನೀಡಬೇಕಾಗಿ ಬಂದಿದ್ದು ಎರಡೂ ದೇಶಗಳ ನಡುವಣ ಸಂಬಂಧ ತೀರಾ ಹದಗೆಟ್ಟಿದೆ ಎನ್ನಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+