• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರಿಂದ ಗುಂಡಿನ ದಾಳಿ

|
Google Oneindia Kannada News

ಶ್ರೀನಗರ, ಮೇ 03: ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಸೋಮವಾರ ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿ ಬಿಎಸ್‌ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಭಾರತದ ಜತೆಗೆ ಮಾತುಕತೆಗೆ ಸಿದ್ಧ ಆದರೆ ಒಂದು ಷರತ್ತು: ಪಾಕಿಸ್ತಾನ ಭಾರತದ ಜತೆಗೆ ಮಾತುಕತೆಗೆ ಸಿದ್ಧ ಆದರೆ ಒಂದು ಷರತ್ತು: ಪಾಕಿಸ್ತಾನ

ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.

ಫೆಬ್ರವರಿ 25ರಂದು ಭಾರತ ಮತ್ತು ಪಾಕಿಸ್ತಾನಗಳು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತಮ್ಮ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ, ನವೆಂಬರ್ 2003ರ ಗಡಿ ಕದನ ವಿರಾಮ ಒಪ್ಪಂದವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಭಯ ದೇಶಗಳು ಸಮ್ಮತಿಸಿದ್ದವು ಎಂದು ತಿಳಿಸಿತ್ತು.

ಬೆಳಿಗ್ಗೆ 6.15 ರ : ಸುಮಾರಿಗೆ ಪಾಕಿಸ್ತಾನ ರೇಂಜರ್ಸ್ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ರಾಮಗರ್ ಸೆಕ್ಟರ್‌ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯ ಯೋಧರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.

English summary
Pakistani Rangers violated the ceasefire by opening fire along the International Border (IB) in Jammu and Kashmir's Samba district on Monday, a senior BSF officer said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X