ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಪಾಕ್‌ನಿಂದ ಪಡೆಯಿಂದ ಗುಂಡಿನ ದಾಳಿ
ಶ್ರೀನಗರ, ನವೆಂಬರ್ 07: ಜಮ್ಮು ಕಾಶ್ಮೀರದ ಪೂಂಚ್ ಹಾಗೂ ಕಥುವಾ ಜಿಲ್ಲೆಗಳಲ್ಲಿ ಪಾಕಿಸ್ತಾನದ ಪಡೆಯಿಂದ ಗುಂಡಿನ ದಾಳಿ ನಡೆದಿದೆ.
ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿದ್ದು, ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿದ್ದಾರೆ.
ಭಾರತೀಯ ಸೇನೆ ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮುಫ್ತಿ
ಇಲ್ಲಿಯವರೆಗಿನ ಮಾಹಿತಿ ಪ್ರಕಾರ ಭಾರತೀಯ ಸೇನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಅಥವಾ ಗಾಯಗಳಾಗಿಲ್ಲ.
ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಮನಕೋಟ್ ಸೆಕ್ಟರ್ ನಲ್ಲಿ ಮಧ್ಯರಾತ್ರಿ 2.30ರಿಂದ ಶೆಲ್ ದಾಳಿ ಆರಂಭವಾಗಿದೆ. ಅಂತಾರಾಷ್ಟ್ರೀಯ ಗಡಿ ರೇಖೆಯ ಹೀರಾನಗರ್ ಸೆಕ್ಟರ್‌ನಲ್ಲೂ ರಾತ್ರಿ ಇಡೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.