• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾದಿಂದ ಸಾವನ್ನಪ್ಪಿದ 2 ತಿಂಗಳ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ಹೆತ್ತವರು

|
Google Oneindia Kannada News

ಶ್ರೀನಗರ, ಮೇ 4: ಎರಡು ತಿಂಗಳ ಮಗು ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿದ್ದಂತೆ ಪೋಷಕರು ಮಗುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾಗಿರುವ ಸಂಗತಿ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಸೋಮವಾರ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗುವಿಗೆ ಆರೋಗ್ಯ ಸಮಸ್ಯೆಯಿದ್ದು, ಹೃದಯದಲ್ಲಿಯೂ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಬಂದ ಕೆಲವೇ ಹೊತ್ತಿಗೆ ಮಗು ಸಾವನ್ನಪ್ಪಿತ್ತು. ಮಗುವನ್ನು ಪರೀಕ್ಷಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಶ್ರೀ ಮಹಾರಾಜ ಗುಲಾಬ್ ಸಿಂಗ್ ಆಸ್ಪತ್ರೆಯ ವೈದ್ಯ ಡಾ. ದಾರಾ ಸಿಂಗ್ ತಿಳಿಸಿದ್ದಾರೆ.

ಕೊರೊನಾ 2ನೇ ಅಲೆ, ಮಕ್ಕಳಿಗೂ ಹೆಚ್ಚು ಅಪಾಯಕಾರಿ: ವೈದ್ಯರ ಎಚ್ಚರಿಕೆಕೊರೊನಾ 2ನೇ ಅಲೆ, ಮಕ್ಕಳಿಗೂ ಹೆಚ್ಚು ಅಪಾಯಕಾರಿ: ವೈದ್ಯರ ಎಚ್ಚರಿಕೆ

ಮಗು ಸೋಂಕಿನಿಂದ ಸಾವನ್ನಪ್ಪುತ್ತಿದ್ದಂತೆ ಪೋಷಕರಿಗೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿತ್ತು. ಆದರೆ ಅವರು ಸತ್ತ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾನೂನು ತೊಡಕಿನಿಂದಾಗಿ ಆಸ್ಪತ್ರೆ ಸಿಬ್ಬಂದಿ ಮಗುವಿನ ಅಂತ್ಯಸಂಸ್ಕಾರವನ್ನು ನೆರವೇರಿಸಲು ಸಾಧ್ಯವಾಗಿಲ್ಲ. ಪೋಷಕರು ಬರದೇ ಇದ್ದರೆ 72 ಗಂಟೆಗಳ ನಂತರ ಅಂತ್ಯಸಂಸ್ಕಾರ ನಡೆಸುವುದಾಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಸೋಮವಾರ 3700 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. 51 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 34000 ಸಕ್ರಿಯ ಪ್ರಕರಣಗಳಿವೆ.

English summary
A two-month-old baby boy dies at a hospital in Jammu and Kashmir after parents abandoned him because he'd tested Covid positive,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X