• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರ ಗಡಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ

|
Google Oneindia Kannada News

ಶ್ರೀನಗರ್, ನವೆಂಬರ್ 3: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಮುಂಭಾಗದ ಪ್ರದೇಶಕ್ಕೆ ನವೆಂಬರ್ 4ರ ಗುರುವಾರದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಗಡಿಯ ಶಿಬಿರಗಳಲ್ಲಿ ಇರುವ ಭಾರತೀಯ ಯೋಧರೊಂದಿಗೆ ಪ್ರಧಾನಿ ಮೋದಿಯವರು ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ.

ಕಳೆದ 2014ರಿಂದ ಪ್ರಧಾನಿ ಮೋದಿಯವರು ದೀಪಾವಳಿಯ ದಿನ ದೇಶದ ಗಡಿಯಲ್ಲಿರುವ ಔಟ್‌ಪೋಸ್ಟ್‌ಗಳಿಗೆ ಭೇಟಿ ನೀಡುತ್ತಾ ಬಂದಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಗಡಿಯಲ್ಲಿರುವ ಭಾರತೀಯ ಸೈನಿಕರಿಗೆ ಸಿಹಿತಿಂಡಿ ಮತ್ತು ಇತರ ಉಡುಗೊರೆಗಳನ್ನು ಪ್ರಧಾನಿ ಮೋದಿ ನೀಡಲಿದ್ದಾರೆ. ಕಳೆದ 2019ರಲ್ಲೂ ಮೋದಿಯವರು ರಾಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು.

ಉತ್ತರಾಖಂಡ್‌: ಸೈನಿಕರ ಜೊತೆ ಪ್ರಧಾನಿ ಮೋದಿ ದೀಪಾವಳಿಉತ್ತರಾಖಂಡ್‌: ಸೈನಿಕರ ಜೊತೆ ಪ್ರಧಾನಿ ಮೋದಿ ದೀಪಾವಳಿ

ಪ್ರಧಾನಿ ಭೇಟಿ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹೊಡೆದುರುಳಿಸಲು ಸೇನಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೂಂಚ್‌ನಲ್ಲಿ ಭಯೋತ್ಪಾದಕರ ಜೊತೆಗಿನ ಗುಂಡಿನ ದಾಳಿಯಲ್ಲಿ ಹಲವು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಶನಿವಾರ ರಜೌರಿಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮುಂಚೂಣಿ ಪೋಸ್ಟ್‌ನ ಬಳಿ ಗಣಿ ಸ್ಫೋಟದಲ್ಲಿ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಸಾವನ್ನಪ್ಪಿದ್ದು, ಘಟನೆಯಲ್ಲಿ ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ.

ಲಡಾಖ್ ಸೆಕ್ಟರ್:

ಭಾರತೀಯ ಸೇನೆಯ ಮತ್ತೊಂದು ಪ್ರಮುಖ ವಲಯ ಎಂದರೆ ಅದು ಲಡಾಖ್ ಸೆಕ್ಟರ್. ಕಳೆದ 18 ತಿಂಗಳಿನಿಂದ ಗಡಿ ಅತಿಕ್ರಮಣವನ್ನು ತಪ್ಪಿಸುವ ಉದ್ದೇಶದಿಂದ ಭಾರತ-ಚೀನಾದ ಸೇನೆಯನ್ನು ಈ ಗಡಿಯಲ್ಲಿ ನಿಯೋಜಿಸಲಾಗಿದೆ.

ಸೈನಿಕರೊಂದಿಗೆ ಪ್ರಧಾನಿ ದೀಪಾವಳಿ:

ಕಳೆದ 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಾಖಂಡ್, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ದೀಪಾವಳಿಯನ್ನು ಆಚರಿಸಿಕೊಂಡು ಬಂದಿದ್ದಾರೆ.

   ಧೋನಿಯ ಈ ಮಾತನ್ನು ಕೇಳಿದ್ದಿದ್ರೆ ಟೀಂ‌ ಇಂಡಿಯಾ ಪಾಕ್ ವಿರುದ್ಧ ಸೋಲ್ತಾನೆ ಇರ್ಲಿಲ್ಲ | Oneindia Kannada
   English summary
   PM Modi to Celebrate Diwali with Army personnel at border outposts in J&K's Rajouri.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X