ಜಮ್ಮು ಮತ್ತು ಕಾಶ್ಮೀರ: ಹಿಜ್ಬುಲ್ ಸಂಘಟನೆಯ 7 ಮಂದಿ ಉಗ್ರರನ್ನು ಬಂಧಿಸಿದ ಪೊಲೀಸರು
ಶ್ರೀನಗರ, ಮಾರ್ಚ್ 13: ಕಾಶ್ಮೀರದ ಶೋಪಿಯಾನ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಶೋಪಿಯಾನ್ ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದು, 'ಖಚಿತ ಮಾಹಿತಿಯನ್ನಾಧರಿಸಿ ಪೊಲೀಸ್ ಪಡೆಗಳು ನಿನ್ನೆ ರಾತ್ರಿ ದಾಳಿ ನಡೆಸಿ, ಶೋಪಿಯಾನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿದ್ದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಏಳು ಸಹಚರರನ್ನು ಬಂಧಿಸಿವೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಶೋಪಿಯಾನ್ ಪೊಲೀಸರು ಇದೀಗ ತಮ್ಮ ಕಾರ್ಯಾಚರಣೆಯನ್ನು ಬಿಗಿ ಮಾಡಿದ್ದು, ಮತ್ತಷ್ಟು ಉಗ್ರ ಸಹಚರರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಸಹಚರ ಜಾಲವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನಾಪಡೆಗಳು ಪತ್ತೆ ಮಾಡಿದ್ದು,ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಏಳು ಸಹಚರರನ್ನು ಬಂಧಿಸಿವೆ.
ಈ ಸಹಚರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಬೇಕಾದ ಎಲ್ಲ ರೀತಿಯ ನೆರವು ನೀಡುವವರು ಎಂದು ತಿಳಿದುಬಂದಿದೆ. ಹಾಗೆಯೇ ಬಂಧಿತರಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












Click it and Unblock the Notifications