ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆ ವ್ಯಾಪಾರದ ಸಾಕ್ಷಿ ನೀಡಿ: ಬಿಜೆಪಿಗೆ ಓಮರ್ ಅಬ್ದುಲ್ಲಾ ಸವಾಲು

|
Google Oneindia Kannada News

ಶ್ರೀನಗರ, ನವೆಂಬರ್ 22: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಯನ್ನು ವಿಸರ್ಜಿಸುವ ನಿರ್ಧಾರವನ್ನು ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ತೆಗೆದುಕೊಂಡಿದ್ದು ಸಾಕಷ್ಟು ವಿವಾದ ಸೃಷ್ಟಿಸಿದೆ.

ಸರ್ಕಾರ ರಚಿಸಲು ಕುದುರೆ ವ್ಯಾಪಾರ ನಡೆಸಲಾಗುತ್ತಿತ್ತು ಎಂದಿರುವ ಬಿಜೆಪಿ ಹೇಳಿಕೆಯನ್ನು ಕಟು ಶಬ್ದಳಿಂದ ಟೀಕಿಸಿರುವ ನ್ಯಾಶನಲ್ ಕಾನ್ಫಿರೆನ್ಸ್ ಪಕ್ಷದ ಮುಖಂಡ ಓಮರ್ ಅಬ್ದುಲ್ಲಾ, "ಕುದುರೆ ವ್ಯಾಪಾರ ನಡೆದಿದೆ ಎಂದಾದರೆ ಮೊದಲು ಸಾಕ್ಷಿ ನೀಡಿ" ಎಂಡು ಬಿಜೆಪಿಗೆ ಸವಾಲೆಸೆದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚಿಸಲಾಗದ್ದಕ್ಕೆ ಕಾರಣ ಬಿಜೆಪಿ ಮತ್ತು ಫ್ಯಾಕ್ಸ್‌ ಮಷಿನ್‌!ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚಿಸಲಾಗದ್ದಕ್ಕೆ ಕಾರಣ ಬಿಜೆಪಿ ಮತ್ತು ಫ್ಯಾಕ್ಸ್‌ ಮಷಿನ್‌!

"ವಿಧಾನಸಭೆಯನ್ನು ವಿಸರ್ಜಿಸುವುದಾದರೆ, ಕಳೆದ ಜೂನ್ ನಲ್ಲೇ ಸರ್ಕಾರ ಬಿದ್ದಿತ್ತು. ಆಗಲೇ ಮಾಡಬಹುದಿತ್ತು. ಇದೀಗ ಡಿಸೆಂಬರ್ 19 ರವರೆಗೂ ಸಮಯವಿದ್ದರೂ ರಾಜ್ಯಪಾಲರು ಅವಸರದಲ್ಲಿ ವಿಧಾನಸಭೆಯನ್ನು ವಿಸರ್ಜಿಸಿದ್ದು ಏಕೆ?" ಎಂದು ಅವರು ಪ್ರಶ್ನಿಸಿದರು.

Provide proof of horse trading: Omar Abdullah challenges BJP

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರು ನೀಡಿದ 4 ಕಾರಣಗಳುಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರು ನೀಡಿದ 4 ಕಾರಣಗಳು

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದುಬಿದ್ದ ನಂತರ, ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿತ್ತು. ಆದರೆ ಹೊಸ ಬೆಳವಣಿಗೆಯಲ್ಲಿ ಪಿಡಿಪಿ, ನ್ಯಾಶನಲ್ ಕಾನ್ಫಿರೆನ್ಸ್ ಮತ್ತು ಕಾಂಗ್ರೆಸ್ ಪಕ್ಷಗಳು ಒಂದಾಗಿ ಸರ್ಕಾರ ರಚಿಸಲು ಮುಂದಾದ ಹಿನ್ನೆಲೆಯಲ್ಲಿ ಬಿಜೆಪಿಯೇ ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಈ ಕೆಲಸ ಮಾಡಿದೆ ಎಂಬ ದೂರು ಕೇಳಿಬರುತ್ತಿದೆ.

English summary
Former chief minister of Jammu and Kshmir, Omar Abdullah challenges BJP, says provide proof of horse trading, support from across the border
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X