ಜಮ್ಮು ಮತ್ತು ಕಾಶ್ಮೀರಕ್ಕೆ ಶುಕ್ರವಾರ ರಾಜನಾಥ್ ಸಿಂಗ್ ಭೇಟಿ

ಶ್ರೀನಗರ, ಫೆಬ್ರವರಿ 14 : ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗೃಹ ಇಲಾಖೆ ಕ್ಷಣ-ಕ್ಷಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್‌ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರ ಜೊತೆ ದೂರವಾಣಿ ಮೂಲಕ ರಾಜನಾಥ್ ಸಿಂಗ್ ಮಾತುಕತೆ ನಡೆಸಿದ್ದಾರೆ. ಉಗ್ರರ ದಾಳಿ ಬಳಿಕ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Pulwama attack : Rajnath Singh likely to visit state on Friday

ಶುಕ್ರವಾರ ಬಿಹಾರಕ್ಕೆ ರಾಜನಾಥ್ ಸಿಂಗ್ ಅವರ ಭೇಟಿ ನೀಡಬೇಕಿತ್ತು. ಆದರೆ, ಎಲ್ಲಾ ಕಾರ್ಯಕ್ರಮಗಳನ್ನು ಅವರು ರದ್ದುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಅವರು ಭೇಟಿ ನೀಡುವ ಸಾಧ್ಯತೆ ಇದೆ.

ರಾಜನಾಥ್ ಸಿಂಗ್ ಅವರು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗುಬ ಮತ್ತು ಸಿಆರ್‌ಪಿಎಫ್ ಡೈರೆಕ್ಟರ್ ಜನರಲ್ ಭಟ್ನಾಗರ್ ಅವರ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಗೃಹ ಇಲಾಖೆ ದಾಳಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಸಂಗ್ರಹಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+