ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಮತ್ತು ಕಾಶ್ಮೀರಕ್ಕೆ ಶುಕ್ರವಾರ ರಾಜನಾಥ್ ಸಿಂಗ್ ಭೇಟಿ

|
Google Oneindia Kannada News

ಶ್ರೀನಗರ, ಫೆಬ್ರವರಿ 14 : ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗೃಹ ಇಲಾಖೆ ಕ್ಷಣ-ಕ್ಷಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ? ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ?

ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್‌ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕಟ್ಟಡ ರಿಪೇರಿ ಕೆಲ್ಸದಿಂದ ಆತ್ಮಾಹುತಿ ದಾಳಿಕೋರನಾದ ಉಗ್ರ ಆದಿಲ್ ಅಹ್ಮದ್ ಕಟ್ಟಡ ರಿಪೇರಿ ಕೆಲ್ಸದಿಂದ ಆತ್ಮಾಹುತಿ ದಾಳಿಕೋರನಾದ ಉಗ್ರ ಆದಿಲ್ ಅಹ್ಮದ್

ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರ ಜೊತೆ ದೂರವಾಣಿ ಮೂಲಕ ರಾಜನಾಥ್ ಸಿಂಗ್ ಮಾತುಕತೆ ನಡೆಸಿದ್ದಾರೆ. ಉಗ್ರರ ದಾಳಿ ಬಳಿಕ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Pulwama attack : Rajnath Singh likely to visit state on Friday

ಶುಕ್ರವಾರ ಬಿಹಾರಕ್ಕೆ ರಾಜನಾಥ್ ಸಿಂಗ್ ಅವರ ಭೇಟಿ ನೀಡಬೇಕಿತ್ತು. ಆದರೆ, ಎಲ್ಲಾ ಕಾರ್ಯಕ್ರಮಗಳನ್ನು ಅವರು ರದ್ದುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಅವರು ಭೇಟಿ ನೀಡುವ ಸಾಧ್ಯತೆ ಇದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಹೆಸರುಗಳು ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಹೆಸರುಗಳು

ರಾಜನಾಥ್ ಸಿಂಗ್ ಅವರು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗುಬ ಮತ್ತು ಸಿಆರ್‌ಪಿಎಫ್ ಡೈರೆಕ್ಟರ್ ಜನರಲ್ ಭಟ್ನಾಗರ್ ಅವರ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಗೃಹ ಇಲಾಖೆ ದಾಳಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಸಂಗ್ರಹಿಸುತ್ತಿದೆ.

English summary
Home Minister Rajnath Singh spoke to Jammu and Kashmir Governor Satya Pal Malik and took stock of the situation in the state after Pulwama attack. Rajnath Singh likely to visit jammu and kashmir on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X