ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ ಪುಲ್ವಾಮಾ ಮಾದರಿ ದಾಳಿ ಹಿಂದೆ ಪಿಎಚ್ ಡಿ ಪದವೀಧರನ ಪಿತೂರಿ!

|
Google Oneindia Kannada News

ಶ್ರೀನಗರ, ಏಪ್ರಿಲ್ 30: ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿ ಕಳೆದ ತಿಂಗಳು ನಡೆದ ಕಾರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಆರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಆರು ಜನರಲ್ಲಿ ಓರ್ವ ಪಿಎಚ್ ಡಿ ಪದವೀಧರ ಎಂಬ ವಿಷಯವನ್ನೂ ಪೊಲೀಸರು ಬಯಲಿಗೆಳೆದಿದ್ದಾರೆ. ಹಿಲಾಲ್ ಅಹ್ಮದ್ ಮಂಟೂ ಎಂಬಾತ ಪಿಎಚ್ ಡಿ ಪಧವೀಧರನಾಗಿದ್ದು, ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾನೆಂದು ತಿಳಿದುಬಂದಿದೆ.

ಬದುಕಿದ್ದೇನೆಂದು ತಿಳಿಸಲು ವಿಡಿಯೋ ಬಿಡುಗಡೆ ಮಾಡಿದ ಉಗ್ರಬದುಕಿದ್ದೇನೆಂದು ತಿಳಿಸಲು ವಿಡಿಯೋ ಬಿಡುಗಡೆ ಮಾಡಿದ ಉಗ್ರ

ಮಾರ್ಚ್ 31 ರಂದು ಜಮ್ಮು ಮತ್ತು ಕಾಶ್ಮೀರದ ಬಾನಿಹಾಲ್ ಎಂಬಲ್ಲಿ ಕಾರೊಂದನ್ನು ಸ್ಫೋಟಿಸಲಾಗಿತ್ತು. ಸಿಆರ್ ಪಿಎಫ್ ಬೆಂಗಾವಲು ವಾಹನವನ್ನು ಗುರಿಯಾಗಿಸಿ ಈ ದಾಳಿ ನಡೆದಿತ್ತು. ಪುಲ್ವಾಮಾ ಮಾದರಿಯಲ್ಲಿ ನಡೆದ ಈ ದಾಳಿ ವಿಫಲವಾಗಿತ್ತು. ಯಾವುದೇ ಸಾವು ನೋವು ಸಂಭವಿಸಿರಲಿಲ್ಲ.

Pulwama like attack on March 31, in JK PhD scholar and 5 other arested

ಈ ಸಂಚನ್ನು ಜೈಶ್ ಇ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಜಂಟಿಯಾಗಿ ರೂಪಿಸಿತ್ತು.

ಈ ದಾಳಿಗೆ ಸಂಬಂಧಿಸಿದಂತೆ ಆರು ಜನರನ್ನು ಮಂಗಳವಾರ ಬಂಧಿಸಲಾಗಿದೆ.

ಭಾರತದಲ್ಲಿ ಲಂಕಾ ಮಾದರಿ ದಾಳಿಗೆ ಸಂಚು: ಐಸಿಸ್ ಶಂಕಿತ ಉಗ್ರ ಬಂಧನ ಭಾರತದಲ್ಲಿ ಲಂಕಾ ಮಾದರಿ ದಾಳಿಗೆ ಸಂಚು: ಐಸಿಸ್ ಶಂಕಿತ ಉಗ್ರ ಬಂಧನ

ಫೆಬ್ರವರಿ 14 ರಂದು ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರಿದ್ದ ವಾಹನದ ಮೇಲೆ ಕಾರ್ ಬಾಂಬ್ ದಾಳಿ ನಡೆಸಿದ ಪರಿಣಾಮ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಇದೇ ಮಾದರಿಯಲ್ಲಿಯೇ ಮಾರ್ಚ್ 31 ರಂದು ದಾಳಿ ನಡೆಸಲಾಗಿತ್ತು.

English summary
Jammu and Kashmir police arrested 6 terrorsits including a PhD acholar in connection with with the explosion inside a car on Jammu-Srinagar highway last month, when a convoy of the CRPF was passing,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X