ಪುಲ್ವಾಮಾ ಭಯೋತ್ಪಾದನಾ ದಾಳಿ: ಐವರು ಶಂಕಿತರು ವಶಕ್ಕೆ

ಶ್ರೀನಗರ, ಫೆಬ್ರವರಿ 15: ಪುಲ್ವಾಮಾದಲ್ಲಿ ಗುರುವಾರ ಸಂಜೆ ನಡೆದ ಭಯೋತ್ಪಾದನಾ ದಾಳಿಯ ಘಟನೆಗೆ ಸಂಬಂಧಿಸಿದಂತೆ ಐವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಭದ್ರತಾ ಪಡೆಗಳು ಐವರು ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿದ್ದು, ಅವರ ವಿವರಗಳನ್ನು ಬಹಿರಂಗಪಡಿಸಿಲ್ಲ. ದಾಳಿಯಲ್ಲಿ ಮೃತಪಟ್ಟ ಸೈನಿಕರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಉಗ್ರರ ದಾಳಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ.

pulwama suicide bomber attack five suspects detained

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೇಶವನ್ನು ವಿಭಜಿಸುವ ಪ್ರಯತ್ನದಲ್ಲಿ ಭಯೋತ್ಪಾದಕರು ಯಶಸ್ವಿಯಾಗುವುದಿಲ್ಲ. ಈ ಸಂದರ್ಭದಲ್ಲಿ ನಾವು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ ಮತ್ತು ನಮ್ಮ ಯೋಧರೊಂದಿಗೆ ನಿಲ್ಲುತ್ತೇವೆ ಎಂದು ತಿಳಿಸಿದರು.

ಇದು ಶೋಕದ ದಿನ. ಭಯೋತ್ಪಾದನಾ ಶಕ್ತಿಗಳೊಂದಿಗೆ ನಾವು ರಾಜಿಮಾಡಿಕೊಳ್ಳಲು ಸಾಧ್ಯವಿಲ್ಲ. ಈ ವೇಳೆ ನಾವು ಒಂದು ದೇಶವಾಗಿ ಒಗ್ಗಟ್ಟಾಗಿ ನಿಂತಿದ್ದೇವೆ. ಈ ದೇಶವನನ್ನು ಒಗ್ಗಟ್ಟಿನಿಂದ ಇರಿಸಲು ಎಲ್ಲವನ್ನೂ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+