• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

19 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ದಾಳಿ

By ವಿಕಾಸ್ ನಂಜಪ್ಪ
|

ಶ್ರೀನಗರ, ಫೆಬ್ರವರಿ 15 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ದಾಳಿ ರಾಜ್ಯದಲ್ಲಿ 19 ವರ್ಷಗಳ ಬಳಿಕ ನಡೆದ ದೊಡ್ಡ ಉಗ್ರರ ದಾಳಿಯಾಗಿದೆ. ಗುರುವಾರ ಮಧ್ಯಾಹ್ನ ನಡೆದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದಾರೆ.

2001ರ ನಂತರ ಭೀಕರ ಆತ್ಮಾಹುತಿ ದಾಳಿಗೆ ತುತ್ತಾದ ಪುಲ್ವಾಮಾ

ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್‌ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದಾರೆ. ಜೈಷ್‌-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸೇನಾ ವಾಹನಕ್ಕೆ ಸ್ಫೋಟಕಗಳನ್ನು ತುಂಬಿಸಿದ್ದ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ.

ಪುಲ್ವಾಮದ ಉಗ್ರರ ದಾಳಿ : ಮಂಡ್ಯದ ಸಿಆರ್‌ಪಿಎಫ್ ಜವಾನ ಹುತಾತ್ಮ

2001ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಆ ದಾಳಿಯಲ್ಲಿ 38 ಜನರು ಮೃತಪಟ್ಟಿದ್ದರು. ಪುಲ್ವಾಮದಲ್ಲಿ ಸೇನಾ ಯೋಧರ ವಾಹನ ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದಾರೆ.

ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ?

2001ರ ಅಕ್ಟೋಬರ್ 1ರಂದು ಜೈಷ್‌-ಎ-ಮೊಹಮ್ಮದ್ ಉಗ್ರ ಸಂಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿತ್ತು. ರಾಜ್ಯದ ವಿಧಾನಸಭೆ ಕಟ್ಟಡಕ್ಕೆ ಸ್ಫೋಟಕ ತುಂಬಿದ ಟಾಟಾ ಸುಮೋವನ್ನು ನುಗ್ಗಿಸಲಾಗಿತ್ತು.

ವಿಧಾನಸಭೆಯ ಮುಖ್ಯ ಗೇಟ್‌ ಮೂಲಕ ಟಾಟಾ ಸುಮೋವನ್ನು ನುಗ್ಗಿಸಿ ನಡೆಸಿದ ದಾಳಿಯಲ್ಲಿ 38 ಜನರು ಮೃತಪಟ್ಟಿದ್ದರು. ವಾಹನ ನುಗ್ಗುತ್ತಿದ್ದಂತೆ ನಡೆದ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಕೊಂದು ಹಾಕಲಾಗಿತ್ತು.

2019ರ ಫೆ.14ರಂದು ಜೈಷ್‌-ಎ-ಮೊಹಮ್ಮದ್ ಉಗ್ರ ಸಂಘಟನೆ ಇದೇ ಮಾದರಿಯ ದಾಳಿಯನ್ನು ನಡೆಸಿದೆ. ಸ್ಫೋಟಕ ತುಂಬಿದ್ದ ಸ್ಕಾರ್ಫಿಯೋ ಕಾರನ್ನು ಸೇನಾ ವಾಹನಕ್ಕೆ ಗುದ್ದಲಾಗಿದೆ. ಆದಿಲ್ ಅಹ್ಮದ್ ದಾರ್ ಆತ್ಮಾಹುತಿ ಉಗ್ರನ ಮೂಲಕ ಈ ದಾಳಿಯನ್ನು ನಡೆಸಲಾಗಿದೆ.

English summary
The ghastly attack at Pulwama, Jammu and Kashmir in which over 20 CRPF jawans have lost their lives is the worst in the past 20 years in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X