• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾದಲ್ಲಿ ಸೇನಾ ವಾಹನದ ಮೇಲೆ ಸುಧಾರಿತ ಬಾಂಬ್ ಸ್ಫೋಟ

|

ಶ್ರೀನಗರ, ಆಗಸ್ಟ್ 2: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಸುಧಾರಿತ ಬಾಂಬ್ ದಾಳಿ ನಡೆಸಿದ್ದಾರೆ.

ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಜಾಹಿದ್‌ಬಾಗ್ ಗ್ರಾಮದಲ್ಲಿ ಭಯೋತ್ಪಾದಕರು ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಐಇಡಿ ಬಾಂಬ್ ಸ್ಫೋಟಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಒಂದೇ ವಾರದಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆಜಮ್ಮು ಕಾಶ್ಮೀರದಲ್ಲಿ ಒಂದೇ ವಾರದಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ

ಸ್ಫೋಟದ ತೀವ್ರತೆಗೆ ಸೇನಾವಾಹನ ಜಖಂಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ದಾಳಿಯ ಬಳಿಕ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಫೆಬ್ರವರಿ 14 ರಂದು ಜಿಲ್ಲೆಯ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು.

ಮೂಲಗಳ ಪ್ರಕಾರ ಇದೇ ವಾಹನದಲ್ಲಿ 55 ರಾಷ್ಟ್ರೀಯ ರೈಫಲ್ಸ್ ಸೈನಿಕರು ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಒಂದು ವಾರದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 28 ಸಾವಿರ ಹೆಚ್ಚುವರಿಯಾಗಿ ಸೈನಿಕರನ್ನು ನೇಮಿಸಿಕೊಳ್ಳಲಾಗಿದೆ. ಉಗ್ರರು ಪಾಕ್‌ ಗಡಿಯಿಂದ ಭಾರತದೊಳಗೆ ನುಸುಳಿರುವ ಮಾಹಿತಿಯೂ ಕೂಡ ಲಭ್ಯವಾಗಿದೆ.

English summary
Rashtriya Rifle (RR) Was targeted by an IED in Shopian, No injury or casualty reported in the incident, however, the vehicle suffered minor damage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X