ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ?

|
Google Oneindia Kannada News

ಶ್ರೀನಗರ, ಫೆಬ್ರವರಿ 14 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ ಮಾಡಿರುವ ಸಾಧ್ಯತೆ ಇದೆ. ಒಂದು ವೇಳೆ ಆರ್‌ಡಿಎಕ್ಸ್ ಬಳಕೆ ಮಾಡಿದ್ದರೆ ನಿಜಕ್ಕೂ ಆತಂಕಕ್ಕೆ ಕಾರಣವಾಗಲಿದೆ.

ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್‌ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಎನ್‌ಐಎ ತನಿಖೆಗೆ ಆದೇಶ ನೀಡಲಾಗಿದೆ.

ಪುಲ್ವಾಮದ ಉಗ್ರರ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿಪುಲ್ವಾಮದ ಉಗ್ರರ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ

ಪುಲ್ವಾಮದ ದಾಳಿಗೆ ಉಗ್ರರು ಆರ್‌ಡಿಎಕ್ಸ್ ಬಳಕೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ದಶಕಗಳ ಕಾಲದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಆರ್‌ಡಿಎಕ್ಸ್ ಬಳಕೆ ಮಾಡಿರಲಿಲ್ಲ. ಆದ್ದರಿಂದ, ಈಗ ಆರ್‌ಡಿಎಕ್ಸ್ ಬಳಕೆ ಮಾಡಿದ್ದು ಹೇಗೆ? ಎಂಬ ಬಗ್ಗೆ ತನಿಖೆ ನಡೆಯುವ ಸಾಧ್ಯತೆ ಇದೆ.

ಕಟ್ಟಡ ರಿಪೇರಿ ಕೆಲ್ಸದಿಂದ ಆತ್ಮಾಹುತಿ ದಾಳಿಕೋರನಾದ ಉಗ್ರ ಆದಿಲ್ ಅಹ್ಮದ್ಕಟ್ಟಡ ರಿಪೇರಿ ಕೆಲ್ಸದಿಂದ ಆತ್ಮಾಹುತಿ ದಾಳಿಕೋರನಾದ ಉಗ್ರ ಆದಿಲ್ ಅಹ್ಮದ್

RDX may have been used in Pulwama attack say reports

ಕಣಿವೆ ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ದಾಳಿಗಳಲ್ಲಿ ಅಮೋನಿಯಂ ನೈಟ್ರೇಟ್ ಬಳಕೆ ಮಾಡಲಾಗಿತ್ತು. ಆದರೆ, ಗುರುವಾರ ನಡೆದ ದಾಳಿಯಲ್ಲಿ ಆರ್‌ಡಿಎಕ್ಸ್ ಬಳಕೆ ಮಾಡಿರುವ ಸಾಧ್ಯತೆ ಇದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಹೆಸರುಗಳುಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಹೆಸರುಗಳು

ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್‌ನಲ್ಲಿ ನಡೆದ ದಾಳಿಯಲ್ಲಿ 40ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದಾರೆ. ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಯೋಧರಿದ್ದ ವಾಹನಕ್ಕೆ ಡಿಕ್ಕಿ ಹೊಡೆಸಿದ ಬಳಿಕ ಗ್ರನೈಡ್ ಸಿಡಿಸಿ ದಾಳಿ ನಡೆಸಲಾಗಿದೆ.

ಪುಲ್ವಾಮದ ಅವಂತಿಪುರ್‌ನಲ್ಲಿ ನಡೆದ ಉಗ್ರರ ದಾಳಿ ಪ್ರಕರಣವನ್ನು ದೇಶಾದ್ಯಂತ ಖಂಡಿಸಲಾಗುತ್ತಿದೆ. ಸರ್ಕಾರ ಪ್ರಕರಣದ ತನಿಖೆಯನ್ನು ಎನ್‌ಐಗೆ ವಹಿಸಿದೆ. ಎನ್‌ಐಎ ಅಧಿಕಾರಿಗಳು ಶುಕ್ರವಾರ ಪುಲ್ವಾಮಾಗೆ ಭೇಟಿ ನೀಡಲಿದ್ದಾರೆ.

English summary
Explosive substance RDX may have been used in the terrorist attack on the CRPF convoy in South Kashmir's Pulwama which left around 40 jawans martyred, say reports. If security agencies confirm that RDX has been used then it is a matter of serious concern.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X