ಐಎಎಸ್ ಹುದ್ದೆ ತೊರೆದ ಷಾ ಫಸಲ್ ಚುನಾವಣಾ ಕಣಕ್ಕೆ ಎಂಟ್ರಿ
ಶ್ರೀನಗರ, ಜನವರಿ 12: ಕೇಂದ್ರ ಸರ್ಕಾರದ ವಿರುದ್ಧವಾಗಿ ಪ್ರತಿಭಟನಾ ರೂಪವಾಗಿ ಐಎಎಸ್ ಹುದ್ದೆ ತೊರೆದಿದ್ದ ಷಾ ಫಸಲ್ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದ್ಯಕ್ಕೆ ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುತ್ತಿಲ್ಲ. ಕಾಶ್ಮೀರದ ಪ್ರತ್ಯೇಕತಾವಾದಿ ಪಕ್ಷ ಹುರಿಯತ್ ಕಾನ್ಫರೆನ್ಸ್ ಸೇರುತ್ತೇನೆ ಎಂದು ಬಂದಿರುವ ವರದಿಗಳೆಲ್ಲವೂ ಸುಳ್ಳು ಎಂದಿದ್ದಾರೆ.

'ದೇಶದಲ್ಲಿರುವ 20 ಕೋಟಿಗೂ ಅಧಿಕ ಮುಸ್ಲಿಮರು ತಲೆ ಎತ್ತಿ ಬಾಳುವಂಥ ಪರಿಸ್ಥಿತಿ ನಿರ್ಮಿಸಬೇಕಿದೆ. ಬಹುಸಂಖ್ಯಾತರ ದಬ್ಬಾಳಿಕೆಯಿಂದ ಮುಸ್ಲಿಮರು ಎರಡನೇ ದರ್ಜೆ ನಾಗರಿಕರಾಗಿದ್ದಾರೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಹತ್ಯಾಕಾಂಡವನ್ನು ಖಂಡಿಸಿ ನಾನು ರಾಜೀನಾಮೆ ನೀಡಿದೆ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
2010ನೇ ಸಾಲಿನ ಐಎಎಸ್ ಅಧಿಕಾರಿ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ಮೊದಲ ಕಾಶ್ಮೀರಿ
ಮೂಲಗಳ ಪ್ರಕಾರ, ಫಸಲ್ ನ್ಯಾಷನಲ್ ಕಾನ್ಫರೆನ್ಸ್ ಸೇರ್ಪಡೆ ಆಗಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕಾಶ್ಮೀರದ ಬಾರಾಮುಲ್ಲಾದಿಂದ ಸ್ಪರ್ಧಿಸುವ ಸಾಧ್ಯತೆ ಇದೆ












Click it and Unblock the Notifications